More

    ತ್ಯಾಗ ಬಲಿದಾನದಿಂದ ಸ್ವಾತಂತ್ರೃ

    ಹುಮನಾಬಾದ್: ಅನೇಕ ಮಹಾತ್ಮರ ಹೋರಾಟ, ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರೃ ಒದಗಿರುವುದರಿಂದ ನಾವೆಲ್ಲರೂ ತಲೆ ಎತ್ತಿ ಜೀವಿಸುವಂತಾಗಿದ್ದು, ಅಂತಹವರ ಆದರ್ಶ, ದೇಶಪ್ರೇಮ ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ರಾಜಶೇಖರ ಪಾಟೀಲ್ ಹೇಳಿದರು.
    ಪಟ್ಟಣದ ತಹಸೀಲ್ ಕಚೇರಿಯಲ್ಲಿ ಶನಿವಾರ ತಾಲೂಕಾಡಳಿತದಿಂದ ಏರ್ಪಡಿಸಿದ 74ನೇ ಸ್ವತಂತ್ರ ದಿನೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸ್ವಾತಂತ್ರಕ್ಕಾಗಿ ನಡೆದ ಹೋರಾಟ ಇತಿಹಾಸ ಮಕ್ಕಳಿಗೆ ತಿಳಿಸಿಕೊಡುವ ಕಾರ್ಯ ಮಾಡಬೇಕು. ಕರೊನಾ ವೈರಸ್ಗೆ ಭಯ ಭೀತರಾಗುವ ಅವಶ್ಯಕತೆ ಇಲ್ಲ, ಕೆಲ ನಿಯಮಗಳನ್ನು ಪಾಲಿಸುವುದು ಅಗತ್ಯವಾಗಿದೆ ಎಂದರು.
    ಕರೊನಾ ವೈರಸ್ ಸಾರ್ವಜನಿಕರಿಗೆ ಹರಡದಂತೆ ತಾಲೂಕಿನಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಹಲವಾರು ಅಧಿಕಾರಿಗಳು ಉತ್ತಮವಾಗಿ ಕೆಲಸ ನಿರ್ವಹಣೆ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರ. ತಹಸೀಲ್ ಕಚೇರಿ ಬಳಿ 46 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ, ಧ್ವಜಾರೊಹಣ ಕಟ್ಟೆ, ಗಾರ್ಡನ್ ಮತ್ತಿತರ ಕಾಮಗಾರಿಗಳಿಗೆ ಅನುದಾನ ಒದಗಿಸಲಾಗಿದೆ ಎಂದರು.
    ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ಕರೊನಾ ಸೇನಾನಿಗಳನ್ನು ಸನ್ಮಾನಿಸಲಾಯಿತು. ತಹಸೀಲ್ದಾರ್ ನಾಗಯ್ಯ ಹಿರೇಮಠ ಪ್ರಾಸ್ತಾವಿಕ ಮಾತನಾಡಿದರು. ಹಿರಿಯ ಸಾಹಿತಿ ಎಚ್.ಕಾಶಿನಾಥ ರೆಡ್ಡಿ ಸ್ವತಂತ್ರ ದಿನೊತ್ಸವದ ಕುರಿತು ಉಪನ್ಯಾಸ ನೀಡಿದರು.
    ಜಿಪಂ ಸದಸ್ಯೆ ಭಾರತಬಾಯಿ ಶೇರಿಕಾರ, ತಾಪಂ ಅಧ್ಯಕ್ಷೆ ರಮೇಶ ಡಾಕುಳಗಿ, ಸ್ಥಾಯಿ ಸಮಿತಿ ಅಧ್ಯಕ್ಷ ಕಂಟೆಪ್ಪ ದಾನಾ, ನೊಡಲ ಅಧಿಕಾರಿ ಡಾ.ಗೊವಿಂದ, ಸಿಪಿಐ ಮಲ್ಲಿಕಾರ್ಜುನ ಯಾತನೂರ್, ತಾಪಂ ಇಓ ವೈಜಿನಾಥ ಫೂಲೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts