More

    ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ


    ಯಾದಗಿರಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಕೈಗೆತ್ತಿಗೊಂಡಿರುವ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಕಾರಿ ಸ್ನೇಹಲ್ ಆರ್., ಸಂಬಂಧಿಸಿದ ಅಕಾರಿಗಳಿಗೆ ಸೂಚನೆ ನೀಡಿದರು.

    ನಗರದ ಜಿಲ್ಲಾಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕರೆದಿದ್ದ ಕೆಕೆಆರ್ಡಿಬಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಮಂಡಳಿಯಿಂದ ಗ್ರಾಮೀಣ ಭಾಗದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ಜಿಲ್ಲೆಗೆ ಬಿಡುಗಡೆಯಾದ ಅನುದಾನ ವಾಪಸ್ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

    2020 ರಿಂದ 22 ನೇ ಸಾಲಿನ ಕಾಮಗಾರಿಗಳಿಗೆ ಆದಷ್ಟು ಶೀಘ್ರ ಆಡಳಿತಾತ್ಮಕ ಅನುಮೋದನೆ ಪಡೆದುಕೊಳ್ಳಬೇಕು. ತಾಂತ್ರಿಕ ಸಮಸ್ಯೆಗಳಿದ್ದರೆ ಕೂಡಲೇ ತಮ್ಮನ್ನು ಸಂಪರ್ಕಿಸಿ ಬಗೆಹರಿಸಿಕೊಳ್ಳಬೇಕು.ಅಲ್ಲದೆ ಕಾಮಗಾರಿಗಳಿಗೆ ತಕ್ಕಂತೆ ಅನುದಾನವನ್ನು ಬಳಸಿಕೊಳ್ಳುವಂತೆ ನಿದರ್ೇಶನ ನೀಡಿದರು.

    ನಿರ್ಮಿತಿ ಕೇಂದ್ರ, ಲೋಕೋಪಯೋಗಿ ಇಲಾಖೆ, ಪಂಚಾಯತ ರಾಜ್ ಇಂಜಿನಿಯರಿಂಗ್, ಗ್ರಾಮೀಣಾಭಿವೃದ್ಧಿ ಕುಡಿಯುವ ನೀರು ಸರಬರಾಜು, ಕೆಆರ್ಐಡಿಎಲ್ ಇಲಾಖೆಗಳ ಅಕಾರಿಗಳಿಗೆ ಮಂಡಳಿಯಿಂದ ನೀಡಿದ ಕಾಮಗಾರಿಗಳನ್ನು ಶೀಘ್ರವೇ ಮುಗಿಸಿ ಅಭಿವೃದ್ಧಿಗೆ ನೆರವಾಗಬೇಕು ಎಂದು ತಾಕೀತು ಮಾಡಿದರು.

    ಪ್ರಸಕ್ತ ಸಾಲಿಗೆ ಮೆಡಿಕಲ್ ಕಾಲೇಜಿನ (ಯಿಮ್ಸ್) ಕಟ್ಟಡ ನಿಮರ್ಾಣ ಸಂಬಂಧ ಸಕರ್ಾರದಿಂದ ಈಗಾಗಲೇ 1.62 ಕೋಟಿ ರೂ.ಅನುದಾನ ಬಿಡುಗಡೆಗೊಂಡಿದೆ. ಶೀಘ್ರವೇ ಟೆಂಡರ್ ಕರೆದು ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts