More

    ತ್ವರಿತವಾಗಿ ವಾಲ್ಮೀಕಿ ಸಮುದಾಯದ ಭವನ ಕಾಮಗಾರಿ ಪ್ರಾರಂಭಿಸಿ

    ಚಿಕ್ಕಬಳ್ಳಾಪುರ: ವಾಲ್ಮೀಕಿ ಭವನವನ್ನು ನಿರ್ಮಿಸುವಲ್ಲಿ ವಿಳಂಬವಾಗುತ್ತಿದ್ದು ತ್ವರಿತವಾಗಿ ಕಾಮಗಾರಿ ಚಾಲನೆ ಕ್ರಮ ಕೈಗೊಳ್ಳುವಂತೆ ವಾಲ್ಮೀಕಿ ಜಯಂತಿ ಆಚರಣೆ ಕುರಿತು ಗುರುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಸಮುದಾಯದ ಮುಖಂಡರು ಜಿಲ್ಲಾಧಿಕಾರಿ ಆರ್.ಲತಾಗೆ ಮನವಿ ಸಲ್ಲಿಸಿದರು.

    ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಪರಿಶಿಷ್ಟ ಪಂಗಡದ ರೈತರಿಗೆ ಕೊಳವೆ ಬಾವಿಗಳನ್ನು ಕೊರೆಸಿಕೊಡುವುದರಲ್ಲಿ ಅಧಿಕಾರಿಗಳು ನಿರ್ಲಕ್ಷೃ ತೋರುತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಲತಾ, ಈಗಾಗಲೇ ವಾಲ್ಮೀಕಿ ಭವನ ನಿರ್ಮಾಣ, ಕೊಳವೆ ಬಾವಿ ಕೊರೆಸುವಿಕೆ, ಸಮುದಾಯದ ಫಲಾನುಭವಿಗಳಿಗೆ ಸಕಾಲಕ್ಕೆ ಸವಲತ್ತುಗಳು ಸಮರ್ಪಕವಾಗಿ ದೊರಕಿಸಿಕೊಲು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

    ಸರಳ ಜಯಂತಿ ಆಚರಣೆ: ಸೋಂಕು ಪ್ರಕರಣಗಳ ನಿಯಂತ್ರಣದ ಸವಾಲಿನ ನಡುವೆಯೂ ಜಿಲ್ಲೆಯಲ್ಲಿ ನಿಯಮಾನುಸಾರ ಮಹನೀಯರ ಜಯಂತಿಗಳನ್ನು ಸರಳವಾಗಿ ಆಚರಿಸಲಾಗುತ್ತಿದೆ. ಅದರಂತೆ ಆ.31ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶ್ರೀ ಮಹರ್ಷಿ ವಾಲ್ಮಿಕಿ ಜಯಂತಿಯನ್ನು ಸರಳ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.
    ಕರೊನಾ ನಿಯಂತ್ರಣದ ಮುಂಜಾಗ್ರತಾ ಕ್ರಮವಾಗಿ ಗುಂಪು ಸೇರುವುದು, ವಿಜೃಂಭಣೆಯಿಂದ ಆಚರಣೆ, ಮೆರವಣಿಗೆಗೆ ಅವಕಾಶವಿಲ್ಲ ಎಂದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೆ ಮಿಥುನ್‌ಕುಮಾರ್, ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್, ಸಮುದಾಯದ ಮುಖಂಡರಾದ ಗವಿರಾಯಪ್ಪ, ಕೆ.ಟಿ.ನಾರಾಯಣಸ್ವಾಮಿ, ಸುಬ್ಬರಾಯಪ್ಪ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts