More

    ದಲಿತ ವಿರೋಧಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿ

    ಚಿತ್ರದುರ್ಗ: ರಾಜ್ಯದಲ್ಲಿ ನಾರಿಯರಿಗೆ ಸುರಕ್ಷತೆ ನೀಡದ, ಅಧಿಕಾರದ ಅಮಲಿನಲ್ಲಿ ತೇಲುತ್ತಿರುವ ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಲೋಕಸಭಾ ಚುನಾವಣೆಯಲ್ಲೇ ತಕ್ಕ ಪಾಠ ಕಲಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನವಿ ಮಾಡಿದರು.

    ಪಟ್ಟಣದ ಕೊಟ್ರೆನಂಜಪ್ಪ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಶುಕ್ರವಾರ ನಡೆದ ಪಕ್ಷದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

    ದೇಶಕ್ಕೆ ಅತ್ಯುತ್ತಮ ಸಂವಿಧಾನ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಪಾರ್ಲಿಮೆಂಟ್ ಚುನಾವಣೆಯಲ್ಲಿ ಸೋಲಿಸಿದ ಕಾಂಗ್ರೆಸ್ಸಿಗರಿಗೆ ಅವರ ಹೆಸರೇಳುವ ಯೋಗ್ಯತೆಯಿಲ್ಲ. ಅಂತ್ಯ ಸಂಸ್ಕಾರಕ್ಕೂ ಗೌರವ ಕೊಡಲಿಲ್ಲ ಎಂದು ಕಿಡಿಕಾರಿದರು.

    ದೇಶದ 9 ರಾಜ್ಯಗಳಲ್ಲಿ ಬರಗಾಲವಿದೆ. ಅಲ್ಲಿನ ಮುಖ್ಯಮಂತ್ರಿಗಳೇ ಖಜಾನೆಯಿಂದ ಪರಿಹಾರ ನೀಡಿದ್ದಾರೆ. ಆದರೆ, ಕರ್ನಾಟಕದ ಸಿಎಂ ಸಿದ್ದರಾಮಯ್ಯ ರೈತರಿಗೆ ನಯಾ ಪೈಸೆ ಕೊಟ್ಟಿಲ್ಲ. 680 ಕೋಟಿ ರೂ. ಹೈನುಗಾರಿಕೆ ಬಾಕಿ ಉಳಿಸಿಕೊಂಡಿದ್ದಾರೆ. ಇಂತಹ ಅನಿಷ್ಟ ಸರ್ಕಾರವನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸೋಲಿಸಿ ಎಂದು ಮತದಾರರಲ್ಲಿ ಕೋರಿದರು.

    ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಜಾರಿಯಲ್ಲಿದ್ದ ಕಿಸಾನ್ ಸಮ್ಮಾನ್, ವಿದ್ಯಾಸಿರಿ ಸೇರಿ ಅನೇಕ ಜನಪರ ಯೋಜನೆಗಳಿಗೆ ಕಾಂಗ್ರೆಸ್ ಕಲ್ಲು ಹಾಕಿದೆ. ಜಮೀನುಗಳಿಗೆ ವಿದ್ಯುತ್ ಪರಿವರ್ತಕ ಅಳವಡಿಕೆ ನಿಯಮ ಬದಲಿಸಿ, ರೈತರ ಮೇಲೆ ಹೊರೆ ಹೆಚ್ಚಿಸಿದೆ. ಅಬಕಾರಿ, ಹಾಲು ಸೇರಿ ಇನ್ನಿತರ ವಸ್ತುಗಳ ಬೆಲೆ ಏರಿಸಿ ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಿಂದ ಕಸಿದುಕೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿದರು.

    ದೇಶ ಮತ್ತು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಅವರು ನೀಡಿದ ಕೊಡುಗೆ ಪ್ರತಿ ಬೂತ್‌ನ ಮತದಾರರಿಗೆ ತಿಳಿಸುವ ಮೂಲಕ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳರನ್ನು 2 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲ್ಲಿಸಿ ಎಂದು ಕೋರಿದರು.

    ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ಯುವ ಮುಖಂಡ ಎಂ.ಸಿ.ರಘುಚಂದನ್, ಅಭ್ಯರ್ಥಿ ಗೋವಿಂದ ಎಂ ಕಾರಜೋಳ ಮಾತನಾಡಿದರು. ಎಂಎಲ್ಸಿಗಳಾದ ರವಿಕುಮಾರ್, ಕೆ.ಎಸ್.ನವೀನ್, ಮುಖಂಡರಾದ ಎಸ್.ಲಿಂಗಮೂರ್ತಿ, ಎ.ಮುರಳಿ, ಜಯಣ್ಣ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts