More

    ದಸರಾ ಯುವ ಸಂಭ್ರಮ

    ಮೈಸೂರು: ನಗರದ ಮಾನಸಗಂಗೋತ್ರಿ ಬಯಲುರಂಗಮಂದಿರಲ್ಲಿ ದಸರಾ ‘ಯುವ ಸಂಭ್ರಮ’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸೆ.16ರಂದು ಸಂಜೆ 5.30ಕ್ಕೆ ಚಾಲನೆ ದೊರೆಯಲಿದ್ದು, ಇದರೊಂದಿಗೆ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮುನ್ನುಡೆ ಬರೆಯಲಾಗುತ್ತದೆ.

    ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಯುವ ಸಂಭ್ರಮವನ್ನು ಉದ್ಘಾಟಿಸುವರು. ವಿಶೇಷ ಆಹ್ವಾನಿತರಾಗಿ ಚಿತ್ರನಟ ಡಾಲಿ ಧನಂಜಯ ಭಾಗವಹಿಸಲಿದ್ದಾರೆ.
    ಮೈಸೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳು ಮತ್ತು ರಾಜ್ಯದ ಇತರ ವಿವಿಗಳ ತಲಾ ಒಂದೊಂದು ತಂಡಗಳು ಸೇರಿದಂತೆ ಒಟ್ಟು 253 ತಂಡಗಳು ಕಾರ್ಯಕ್ರಮ ನೀಡಲಿವೆ. 10,500 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

    ನಿತ್ಯ 28 ತಂಡಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನ ನೀಡಲಿದ್ದು, ಪ್ರತಿ ತಂಡಕ್ಕೆ 10 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ. ಜತೆಗೆ ಪ್ರತಿ ತಂಡದಲ್ಲಿ 30ರಿಂದ 40 ಕಲಾವಿದರಿಗೆ ಮಾತ್ರ ಅವಕಾಶ ಇರಲಿದೆ. ನಿತ್ಯ ಸಂಜೆ 5.30ರಿಂದ ರಾತ್ರಿ 10ರ ವರೆಗೆ ಕಾರ್ಯಕ್ರಮ ನಡೆಯಲಿದೆ. ಸೆ.24ಕ್ಕೆ ಸಮಾರೋಪಗೊಳ್ಳಲಿದೆ.

    ಈ ಸಲ ಯುವ ಸಂಭ್ರಮಕ್ಕೆ ಸ್ವಾತಂತ್ರ್ಯ ಅಮೃತ ಮಹೋತ್ಸವ, ಸ್ವಾತಂತ್ರೃ ಹೋರಾಟಕ್ಕೆ ಕರ್ನಾಟಕದ ಕೊಡುಗೆ, ರಾಷ್ಟ್ರೀಯ ಭಾವೈಕ್ಯತೆ, ಕನ್ನಡ ಸಂಸ್ಕೃತಿ ಮತ್ತು ಜಾನಪದ ಕಲೆ, ಮಹಿಳಾ ಸಬಲೀಕರಣ, ಮಾದರಿ ಮೈಸೂರು ನಿರ್ಮಾಣಕ್ಕೆ ಅರಸರ ಕೊಡುಗೆ ಮತ್ತು ಪರಿಸರ ಸಂರಕ್ಷಣೆ ಸೇರಿ 9 ವಸ್ತು ವಿಷಯಗಳನ್ನು ನೀಡಲಾಗಿದೆ. ಈ ಆಶಯಗಳನ್ನಿಟ್ಟುಕೊಂಡು ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts