More

    ದಾವಣಗೆರೆಯಲ್ಲಿ ನೈತಿಕ ಪೊಲೀಸ್‌ಗಿರಿ- ಇಬ್ಬರ ಬಂಧನ

    ದಾವಣಗೆರೆ: ಯುವತಿಯೊಬ್ಬರ ಮೇಲೆ ನೈತಿಕ ಪೊಲೀಸ್‌ಗಿರಿ ಮಾಡಿದ ದೂರಿನ ಹಿನ್ನೆಲೆಯಲ್ಲಿ ಕೆಟಿಜೆ ನಗರ ಠಾಣೆ ಪೊಲೀಸರು ಯುವಕರಿಬ್ಬರನ್ನು ಬಂಧಿಸಿದ್ದಾರೆ.
    ದಾವಣಗೆರೆಯ ದೊಡ್ಡೇಶಿ, ನಿಂಗರಾಜ ಬಂಧಿತರು. ಚಿತ್ರದುರ್ಗ ಜಿಲ್ಲೆ ಗ್ರಾಮವೊಂದರ ಯುವತಿ, ಅನ್ಯ ಕೋಮಿನ ಯುವಕರೊಂದಿಗೆ ಶುಕ್ರವಾರ ಮಧ್ಯಾಹ್ನ ಗೀತಾಂಜಲಿ ಚಿತ್ರಮಂದಿರಕ್ಕೆ ಸಿನಿಮಾ ವೀಕ್ಷಣೆಗೆ ತೆರಳಿದ್ದರು.
    ಅಲ್ಲಿಗೆ ಬಂದಿದ್ದ ಆರೋಪಿಗಳಾದ ದೊಡ್ಡೇಶಿ, ನಿಂಗರಾಜ ಯುವತಿ ವಿರುದ್ಧ ಜಾತಿನಿಂದನೆ ಮಾಡಿ, ಅಲ್ಲಿದ್ದ ಯುವಕರ ಮೇಲೆ ಹಲ್ಲೆ ಮಾಡಿ, ಅದನ್ನು ನೇರವಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು ಎನ್ನಲಾಗಿದೆ.
    ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಂಧಿಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ ಎಂದು ಎಸ್ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ.
    ಯುವತಿಗೆ ಯುವಕರು ತೊಂದರೆ ನೀಡಿದ್ದರೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಯಾವುದೇ ಪ್ರಕರಣದಲ್ಲಿ ಖುದ್ದಾಗಿ ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅಧಿಕಾರವಿಲ್ಲ. ಮಹಿಳೆಯೊಬ್ಬರ ಖಾಸಗಿ ಜೀವನವನ್ನು ಫೇಸ್‌ಬುಕ್‌ನಂತಹ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವುದು ಸಂವಿಧಾನಬಾಹಿರ ಕ್ರಮವಾಗಿದೆ.
    ಆರೋಪಿತರ ವಿರುದ್ಧ ನೈತಿಕ ಪೊಲೀಸ್‌ಗಿರಿ ಮಾಡಿದ್ದರ ಸಂಬಂಧ ಹಳೆಯ ಪ್ರಕರಣಗಳಿವೆಯೆ? ಅವರಿಗೆ ಯಾರು ಮಾಹಿತಿ ನೀಡಿದರು, ಯಾರು ಕುಮ್ಮಕ್ಕು ನೀಡಿದ್ದಾರೆ ಎಂಬ ಬಗ್ಗೆಯೂ ಕೂಲಂಕಷ ತನಿಖೆ ನಡೆಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts