More

    ದಾವಣಗೆರೆಯಲ್ಲಿ ರಕ್ತದಾನ ಶಿಬಿರ- ರಕ್ತದಾನ ಮಾಡಿ, ಜೀವಗಳನ್ನು ಉಳಿಸಿ- ಪ್ರಭಾ ಮಲ್ಲಿಕಾರ್ಜುನ್

    ದಾವಣಗೆರೆ: ರಕ್ತದಾನ ಉಳಿದೆಲ್ಲ ದಾನಗಳಲ್ಲಿ ಶ್ರೇಷ್ಠವಾದುದು. ಅಪಘಾತ ಮತ್ತು ತುರ್ತು ಸಂದರ್ಭದಲ್ಲಿ ಕೆಲವರಿಗೆ ರಕ್ತದ ಅಗತ್ಯತೆ ಇರಲಿದೆ. ಹೀಗಾಗಿ ರಕ್ತದಾನ ಮಾಡಿ ಜೀವಗಳನ್ನು ಉಳಿಸಬೇಕು ಎಂದು ಬಾಪೂಜಿ ವಿದ್ಯಾಸಂಸ್ಥೆಯ ನಿರ್ದೇಶಕಿ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

    ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಹಾಗೂ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ 93ನೇ ಜನ್ಮದಿನದ ಅಂಗವಾಗಿ ನಗರದ ಐಎಂಎ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
    ಹಿಂದಿನ ವರ್ಷ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಜನ್ಮದಿನದಂದು 5555 ಮಂದಿಯ ರಕ್ತ ಸಂಗ್ರಹಣೆ ಗುರಿ ಹೊಂದಲಾಗಿತ್ತು. ಸೆಪ್ಟೆಂಬರ್‌ನಲ್ಲಿ ಮತ್ತೆ ಜನ್ಮದಿನ ಆಚರಣೆ ಆಗಲಿದೆ. ಈ ವೇಳೆಗೆ ನಿಗದಿತ ಗುರಿ ತಲುಪಲಾಗುವುದು. ರಕ್ತ ಸಂಗ್ರಹಣೆ ಮಾಡಿ ಅಗತ್ಯವಿದ್ದವರಿಗೆ ಪೂರೈಸುವ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದರು.
    ಶಿಬಿರದಲ್ಲಿ 93 ಮಂದಿ ಸ್ವಯಂಪ್ರೇರಿತ ರಕ್ತದಾನಿಗಳು ರಕ್ತದಾನ ಮಾಡಿದರು.
    ಈ ವೇಳೆ ಕಾಂಗ್ರೆಸ್‌ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡ್ರು ಗಿರೀಶ್, ಪಾಲಿಕೆ ಸದಸ್ಯರಾದ ಕೆ. ಚಮನ್‌ಸಾಬ್, ಸೈಯದ್ ಚಾರ್ಲಿ, ಆಶಾ ಉಮೇಶ್, ಎಂಸಿಸಿ ಬಿ ಬ್ಲಾಕ್ ನ ನಾಗರಿಕರು, ಮುಖಂಡರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts