More

    ದಾಸಶ್ರೇಷ್ಠರ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಿ

    ಹುಣಸೂರು: ದಾಸಶ್ರೇಷ್ಠ ಕನಕದಾಸರ ಕೀರ್ತನೆಗಳನ್ನು ಯುವಸಮೂಹ ಅಧ್ಯಯನ ಮಾಡುವ ಮೂಲಕ ಅವರ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಶಾಸಕ ಎಚ್.ಪಿ.ಮಂಜುನಾಥ್ ತಿಳಿಸಿದರು.

    ನಗರದ ಕನಕ ಭವನದಲ್ಲಿ ತಾಲೂಕು ಕುರುಬರ ಅಭಿವೃದ್ಧಿ ಸಮಿತಿ ವತಿಯಿಂದ ಭಾನುವಾರ ಆಯೋಜಿಸಿದ್ದ ಕನಕದಾಸರ 535ನೇ ಜಯಂತಿ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಕನಕದಾಸರ ಬದುಕು ಮತ್ತು ಬರಹ ಎರಡೂ ಇಂದಿನ ಸಮಾಜಕ್ಕೆ ಮಾದರಿಯಾಗಿವೆ. ಕನಕದಾಸರ ಕೀರ್ತನೆಗಳು ಸಮಾಜದ ಅಂಕುಡೊಂಕುಗಳನ್ನು ಗುರುತಿಸಿದ್ದವು. ಇಂದಿನ ಯುವಸಮೂಹ ಅವರ ಕೀರ್ತನೆಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಉಳಿಸಿಕೊಳ್ಳಬೇಕೆಂದರು.

    ರಾಜ್ಯ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಜಿ.ಡಿ.ಹರೀಶ್‌ಗೌಡ ಮಾತನಾಡಿ, ಸಂಗೊಳ್ಳಿ ರಾಯಣ್ಣ ಹೋರಾಟದ ಮೂಲಕ ದೇಶಭಕ್ತಿಯನ್ನು ಮೆರೆದರು. ಅಂತೆಯೆ, ರಾಣಿ ಅಹಲ್ಯಬಾಯಿ ಹೋಳ್ಕರ್ ಹಿಂದು ಧರ್ಮ ರಕ್ಷಕಿಯಾಗಿದ್ದರು. ಕನಕದಾಸರ ಆದರ್ಶ ಜೀವನ ಮತ್ತು ರಾಯಣ್ಣನ ಹೋರಾಟದ ಬದುಕನ್ನು ಯುವಕರು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಕೇವಲ ಡಾಕ್ಟರ್, ಇಂಜಿನಿಯರ್ ಆಗುವುದನ್ನೇ ಪರಿಗಣಿಸಿದೆ, ದಾಸಶ್ರೇಷ್ಠರು ನೀಡಿದ ಮಾನವೀಯ ಸಂದೇಶಗಳನ್ನು ಪರಿಪಾಲಿಸಬೇಕು ಎಂದರು.

    ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಾರ್ಯಕ್ರಮ ಉದ್ಘಾಟಿಸಿದರು. ವಿಧಾನಪರಿಷತ್ ಸದಸ್ಯ ಡಿ.ತಿಮ್ಮಯ್ಯ, ಕಾವೇರಿ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ.ಲೋಹಿತ್, ಕುರುಬ ಅಭಿವೃದ್ಧಿ ಸಮಿತಿ ತಾಲೂಕು ಅಧ್ಯಕ್ಷ ಡಿ.ಕೆ.ಕುನ್ನೇಗೌಡ, ಪ್ರಧಾನ ಕಾರ್ಯದರ್ಶಿ ವಾಸೇಗೌಡ, ಖಜಾಂಚಿ ಗಣೇಶ್ ಕುಮಾರಸ್ವಾಮಿ, ಉಪಾಧ್ಯಕ್ಷ ಮಂಡ್ಯ ಮಹೇಶ್, ಮೈಮುಲ್ ನಿರ್ದೇಶಕಿ ಶಿವಗಾಮಿ, ಪೌರಾಯುಕ್ತೆ ಎಂ.ಮಾನಸಾ, ನಗರಸಭೆ ಉಪಾಧ್ಯಕ್ಷೆ ಆಶಾ ಕೃಷ್ಣನಾಯಕ, ಸದಸ್ಯ ಸ್ವಾಮಿಗೌಡ, ನರಸಿಂಹ, ಚಂದ್ರೇಗೌಡ, ಮುಖಂಡರಾದ ಡಾ.ಲೋಹಿತ್, ಜಯರಾಂ, ಕಣಗಾಲು ರಾಮೇಗೌಡ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts