More

    ದಿನೇ ದಿನೆ ಹೆಚ್ಚುತ್ತಿರುವ ಪರಿಸರ ಜಾಗೃತಿ

    ಕುಶಾಲನಗರ: ಪರಿಸರ ಮಹತ್ವ, ನೀರು ಸಂರಕ್ಷಣೆ, ಮರಗಳನ್ನು ಬೆಳೆಸುವ ವಿಧಾನಗಳನ್ನು ಪ್ರತಿಯೊಬ್ಬರೂ ತಿಳಿದುಕೊಂಡು ಅದರ ಮೂಲಕ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿದರೆ ಪರಿಸರ ಸುರಕ್ಷಿತವಾಗಿರುತ್ತದೆ ಎಂದು ಕೃಷಿ ಇಲಾಖೆ ಉಪನಿರ್ದೇಶಕ ಡಾ.ಬಾಲರಾಜ್ ರಂಗರಾವ್ ಅಭಿಪ್ರಾಯಪಟ್ಟರು.


    ಕೊಡಗು ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ಸೋಮವಾರಪೇಟೆ, ಜಲಾನಯನ ಅಭಿವೃದ್ಧಿ ಘಟಕದ ಸಂಯುಕ್ತಾಶ್ರಯದಲ್ಲಿ 7ನೇ ಹೊಸಕೋಟೆ ಗ್ರಾಮದ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಏರ್ಪಡಿಸಿದ್ದ ಬುಧವಾರ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮೊದಲಿಗಿಂತ ಈಗ ಸಾರ್ವಜನಿಕರಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡುತ್ತಿದೆ ಎಂದರು.


    ಸಂಪನ್ಮೂಲ ವ್ಯಕ್ತಿಯಾಗಿದ್ದ ಡಾ.ಚಂದ್ರಶೇಖರ್ ಮಾತನಾಡಿದರು. ಹೊಸಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್, ಸೋಮವಾರಪೇಟೆ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಯಾದವ್ ಬಾಬು, ಕೃಷಿ ಅಧಿಕಾರಿ ನವ್ಯಾ ನಾಣಯ್ಯ, ಗ್ರಾಮ ಪಂಚಾಯಿತಿ ಸದಸ್ಯರು ಇತರರಿದ್ದರು.


    ಪರಿಸರ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ವಿವಿಧ ಬಗೆಯ ಔಷಧೀಯ ಗುಣಗಳನ್ನು ಹೊಂದಿದ ಮತ್ತು ಹಣ್ಣಿನ ಗಿಡಗಳನ್ನು ಕೃಷಿ ಇಲಾಖೆ ವತಿಯಿಂದ ಉಚಿತವಾಗಿ ನೀಡಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts