More

    ದಿ.ನರಸಿಂಹರಾಜು ಜನ್ಮ ಶತಮಾನೋತ್ಸವ ನಾಳೆ

    ದಾವಣಗೆರೆ: ಅಖಿಲ ಕರ್ನಾಟಕ ಸರ್ವಜ್ಞ ಸಾಂಸ್ಕೃತಿಕ ಕಲಾ ವೇದಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಕುವೆಂಪು ಕನ್ನಡ ಭವನದಲ್ಲಿ ಸೆ.24 ರಂದು ಹಾಸ್ಯಚಕ್ರವರ್ತಿ ದಿ.ನರಸಿಂಹರಾಜು ಅವರ ಜನ್ಮ ಶತಮಾನೋತ್ಸವ ಹಮ್ಮಿಕೊಳ್ಳಲಾಗಿದೆ.

    ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಜನ್ಮದಿನದ ಪ್ರಯುಕ್ತ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ವೇದಿಕೆ ಅಧ್ಯಕ್ಷ ಕೆ.ವೈ. ತಿಪ್ಪೇಸ್ವಾಮಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಭಾನುವಾರ ಬೆಳಗ್ಗೆ 10.30 ಕ್ಕೆ ಚಿತ್ರದುರ್ಗದ ಬಸವಮೂರ್ತಿ ಕುಂಬಾರ ಗುಂಡಯ್ಯ ಸ್ವಾಮೀಜಿ ಹಾಗೂ ಅಳಿಕೆ ಶಿವಾನಂದ ಸರಸ್ವತಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಶಾಸಕ ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಉದ್ಘಾಟಿಸುವರು. ಪಾಲಿಕೆ ಮಹಾಪೌರ ವಿನಾಯಕ ಪೈಲ್ವಾನ್ ಅಧ್ಯಕ್ಷತೆ ವಹಿಸುವರು.
    ಸಂಸದ ಜಿ.ಎಂ. ಸಿದ್ದೇಶ್ವರ, ದಾವಣಗೆರೆ ವಿವಿ ಕುಲಪತಿ ಬಿ.ಡಿ. ಕುಂಬಾರ್, ಮಡಿಕೇರಿಯ ನ್ಯಾಯಾಧೀಶೆ ರೇಣುಕಾಂಬ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಸಾಹಿತಿ ಎಂ.ಜಿ. ಈಶ್ವರಪ್ಪ, ಕಸಾಪ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
    ರಕ್ತದಾನ, ನೇತ್ರದಾನ ಶಿಬಿರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.
    ಪದಾಧಿಕಾರಿಗಳಾದ ಕೆ.ಎಂ. ತಿಪ್ಪೇಸ್ವಾಮಿ, ಕೆ. ನಾಗರಾಜ್, ಜಿ. ಹರೀಶ್ ಸುದ್ದಿಗೋಷ್ಠಿಯಲ್ಲಿದ್ದರು.
    —–

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts