More

    ದುಶ್ಚಟಕ್ಕೆ ಯುವಜನ ಬಲಿ

    ಚಿತ್ರದುರ್ಗ: ಬಾಯಿ ಆರೋಗ್ಯ, ದೈಹಿಕ ಆರೋಗ್ಯಕ್ಕೆ ಸಹಕಾರಿಯಾಗಿದೆ ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಅಭಿನವ್ ಅಭಿಪ್ರಾಯಪಟ್ಟರು.
    ವಿಶ್ವ ಬಾಯಿ ಆರೋಗ್ಯ ದಿನಾಚರಣೆ ಅಂಗವಾಗಿ ಡಿಎಚ್‌ಒ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಲ್ಲಿ ಮಾತನಾಡಿ, ದುಶ್ಚಟದ ದಾಸರಾಗಿ ಯುವಪೀಳಿಗೆ ಚಿಕ್ಕ ವಯಸ್ಸಿನಲ್ಲಿ ಜೀವಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
    ‘ಎ ಹ್ಯಾಪಿ ಮೌತ್ ಇಸ್.. ಎ ಹ್ಯಾಪಿ ಬಾಡಿ’ ಎಂಬ ಘೋಷಣೆಯಡಿ ಈ ಬಾರಿ ವಿಶ್ವ ಬಾಯಿ ಆರೋಗ್ಯ ದಿನವನ್ನು ಆಚರಿಸಲಾಗುತ್ತಿದೆ. ಬಾಯಿ ಆರೋಗ್ಯದ ಮಹತ್ವದೆಡೆ ಜನರಲ್ಲಿ ಅರಿವು ಮೂಡಿಸಬೇಕಿದೆ ಎಂದರು.
    ಜಿಲ್ಲಾಶಸ್ತ್ರ ಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಮಾತನಾಡಿ, ತಂಬಾಕು, ಗುಟ್ಖಾ, ಧೂಮಪಾನದಂಥ ದುಶ್ಚಟಗಳಿಗೆ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗುತ್ತಿದ್ದಾರೆ. ಬಾಯಿ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ರಾಷ್ಟ್ರೀಯ ಬಾಯಿ ಆರೋಗ್ಯ ದಿನಾಚರಣೆ ಜನರಲ್ಲಿ ಜಾಗೃತಿ ಮೂಡಿಸಲು ನೆರವಾಗಲಿದೆ ಎಂದರು.
    ದಂತ ತಜ್ಞ ಡಾ.ಚಂದ್ರಶೇಖರ್ ಮಾತನಾಡಿ, ಬಾಯಿ ಕ್ಯಾನ್ಸರ್ ಪ್ರಮಾಣ ಹೆಚ್ಚಾಗುತ್ತಿದ್ದು, ಬಾಯಿ ಕಾಯಿಲೆಗಳಿಗೆ ಕಾರಣವಾಗುವ ಅಂಶಗಳೆಡೆ ಜಾಗೃತಿ ಮೂಡಿಸಲು ಆದ್ಯತೆ ನೀಡಬೇಕಾಗಿದೆ ಎಂದು ಹೇಳಿದರು.
    ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದ ದಂತ ತಜ್ಞ ಡಾ.ಪ್ರಸನ್ನಕುಮಾರ್ ಮಾತನಾಡಿದರು. ಜಿಲ್ಲಾ ನೋಡಲ್ ಅಧಿಕಾರಿ ಡಾ.ಟಿ.ರುದ್ರೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ಜಿಲ್ಲಾ ಮೇಲ್ವಿಚಾರಣಾಧಿಕಾರಿಗಳಾದ ಎಂ.ಬಿ.ಹನುಮಂತಪ್ಪ, ಆಂಜನೇಯ, ಆರೋಗ್ಯ ಶಿಕ್ಷಣಾಧಿಕಾರಿಗಳಾದ ಕೃಷ್ಣಾನಾಯ್ಕಾ, ಬಿ.ಗೌರಮ್ಮ, ಸುನಂದಾಬಾಯಿ, ಎನ್.ಎಸ್.ಮಂಜುನಾಥ, ಶಾಂತಮ್ಮ, ರಂಗಾರೆಡ್ಡಿ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts