More

    ದೂರದೃಷ್ಟಿಯಿಂದ ಗಟ್ಟಿಯಾಗಿರುವ ಸಹಕಾರಿ ಕ್ಷೇತ್ರ

    ವಿಜಯವಾಣಿ ಸುದ್ದಿಜಾಲ ಶಿರಸಿ: ಶತಮಾನಗಳ ಹಿಂದೆ ಸಹಕಾರ ಕ್ಷೇತ್ರದಲ್ಲಿ ಹಿರಿಯರು ಹೊಂದಿದ್ದ ದೂರದೃಷ್ಟಿಯ ಫಲವಾಗಿ ಸಹಕಾರಿ ಕ್ಷೇತ್ರ ಇಂದಿಗೂ ಬಲಾಢ್ಯವಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

    ತಾಲೂಕಿನ ಗೋಳಿಯಲ್ಲಿ ಶನಿವಾರ ಹಾರೂಗಾರ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಕಷ್ಟದ ಸಂದರ್ಭದಲ್ಲಿ ಹುಟ್ಟಿದರೂ ಹಿರಿಯರ ಇಚ್ಚಾಶಕ್ತಿಯ ಕಾರಣ ಸಂಘ ಶತಮಾನೋತ್ಸವ ಆಚರಿಸುತ್ತಿದೆ. ಹಾಗಾಗಿ ಹಿರಿಯರ ದೂರದೃಷ್ಟಿಯ ಚಿಂತನೆಯನ್ನು ಗೌರವಿಸುವ ಅಗತ್ಯವಿದೆ ಎಂದು ಹೇಳಿದರು.

    ಶತಮಾನೋತ್ಸವ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿದ ಕಾರ್ವಿುಕ ಸಚಿವ ಶಿವರಾಮ ಹೆಬ್ಬಾರ, ಸಹಕಾರಿ ಕ್ಷೇತ್ರದಲ್ಲಿರುವ ಲೋಪದೋಷಗಳನ್ನು ಶೀಘ್ರವೇ ಪರಿಹರಿಸಲು ಸಂಬಂಧಪಟ್ಟ ಇಲಾಖೆ ಸಚಿವರ ಜತೆ ರ್ಚಚಿಸಿ ಸಹಕಾರಿ ಕಾನೂನಿಗೆ ತಿದ್ದುಪಡಿಗೆ ಕ್ರಮವಹಿಸಲಾಗುವುದು ಎಂದರು.

    ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷ ಶ್ರೀಧರ ಹೆಗಡೆ ತಾರೇಹಳ್ಳಿ ಅಧ್ಯಕ್ಷತೆ ವಹಿಸಿದ್ದರು. ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ಕದಂಬ ಮಾರ್ಕೆಟಿಂಗ್ ಸೌಹಾರ್ದ ಸಹಕಾರಿಯ ಅಧ್ಯಕ್ಷ ಶಂಭುಲಿಂಗ ಹೆಗಡೆ, ಎಂಇಎಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಜಿ.ಎಂ.ಹೆಗಡೆ ಮುಳಖಂಡ, ನೆಗ್ಗು ಗ್ರಾಪಂ ಅಧ್ಯಕ್ಷೆ ಸರಸ್ವತಿ ಹೆಗಡೆ, ಸಹಕಾರಿ ನಿಬಂಧಕಿ ಸುಜಾತಾ ಬಂಟ, ಸಮಿತಿ ಉಪಾಧ್ಯಕ್ಷ ಎಂ.ಆರ್. ಹೆಗಡೆ ಪಟ್ಟಿಗುಂಡಿ, ಗೌರವ ಕಾರ್ಯದರ್ಶಿ ಜಿ.ಆರ್.ಭಟ್ಟ ಟೊಣ್ಣೇಮನೆ, ಸಂಘದ ಉಪಾಧ್ಯಕ್ಷ ಕೇಶವ ಹೆಗಡೆ ಅಮ್ಮಚ್ಚಿ ಮುಂತಾದವರು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಗುರುಪಾದ ಹೆಗಡೆ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಗಣೇಶ ಹೆಗಡೆ ನಿರೂಪಿಸಿದರು. ಈ ವೇಳೆ ಸಂಘದ ಆಡಳಿತ ಮಂಡಳಿ ಮಾಜಿ ನಿರ್ದೇಶಕರು, ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts