More

    ದೂರುಗಳಿಗೆ ಅವಕಾಶ ನೀಡಬೇಡಿ

    ಚಿತ್ರದುರ್ಗ: ಲೋಕಸಭಾ ಚುನಾವಣೆ ಹಿನ್ನೆಯಲ್ಲಿ ಯಾವುದೇ ದೂರುಗಳಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಕ್ಷೇತ್ರದ ಚುನಾವಣಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಧಾನಸಭಾ ಕ್ಷೇತ್ರವಾರು ಸಹಾಯಕ ಚುನಾವಣಾಧಿಕಾರಿಗಳ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

    ಕ್ಷೇತ್ರದಲ್ಲಿ ಸರ್ಕಾರಿ, ವಿವಿಧ ಪಕ್ಷಗಳ, ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಅನಧಿಕೃತ ಗೋಡೆ ಬರಹ, ಬಿತ್ತಿ ಚಿತ್ರಗಳು, ಬ್ಯಾನರ್ ಹಾಗೂ ಬಂಟಿಗ್ಸ್ ಸೇರಿದಂತೆ ಹೋರ್ಡಿಂಗ್ಸ್‌ಗಳನ್ನು ತೆರವುಗೊಳಿಸಬೇಕು. ಈ ಕುರಿತು ಚುನಾವಣಾ ಆಯೋಗಕ್ಕೆ ಸಕಾಲದಲ್ಲಿ ಮಾಹಿತಿ ಒದಗಿಸಬೇಕು ಎಂದು ತಿಳಿಸಿದರು.

    ಅಂತರಾಜ್ಯ ಗಡಿಯಲ್ಲಿನ ಚೆಕ್‌ಪೋಸ್ಟ್ಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ. ಜಿಲ್ಲಾ ವ್ಯಾಪ್ತಿ, ವಿವಿಧೆಡೆ ನಿರ್ಮಿಸಿರುವ ಚೆಕ್‌ಪೋಸ್ಟ್ ಭಾನುವಾರದಿಂದ ಕಾರ್ಯಾರಂಭ ಆಗಲಿವೆ. ಸಹಾಯಕ ಚುನಾವಣಾಧಿಕಾರಿಗಳು, ತಹಸೀಲ್ದಾರರು ಮತಗಟ್ಟೆಗಳಿಗೆ ಭೇಟಿ ನೀಡಿ ಸ್ಥಿತಿಗತಿ ಪರಿಶೀಲಿಸಿ ವರದಿ ನೀಡಬೇಕು ಎಂದು ಸೂಚಿಸಿದರು.

    ಸುವಿಧಾದಲ್ಲೇ ಪ್ರಚಾರಕ್ಕಾಗಿ ಅರ್ಜಿ: ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಚುನಾವಣೆ ಪ್ರಚಾರಕ್ಕಾಗಿ ಸುವಿಧಾ ತಂತ್ರಾಂಶದಲ್ಲಿಯೇ ಅರ್ಜಿ ಸಲ್ಲಿಸಬೇಕು. ಈ ಕುರಿತು ಪಕ್ಷಗಳ ಪ್ರತಿನಿಧಿಗಳಿಗೆ ಸೂಕ್ತ ಮಾಹಿತಿ ನೀಡಿ. ಸರ್ಕಾರದ ಅನುದಾನದಲ್ಲಿ ನಿರ್ಮಿಸಿರುವ ಕಟ್ಟಡಗಳನ್ನು ಸುಪರ್ದಿಗೆ ಪಡೆಯಬೇಕು. ಈ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ರಾಜಕೀಯ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದರು.

    ಅನುಮತಿ ಅಗತ್ಯವಿಲ್ಲ: ಮಾದರಿ ನೀತಿ ಸಂಹಿತೆ ಉಲ್ಲಘಂನೆಯಾಗದಂತೆ ಅಧಿಕಾರಿಗಳು ನಿಗಾವಹಿಸಬೇಕು. ಧಾರ್ಮಿಕ ಹಾಗೂ ಮದುವೆ ಮುಂಜಿ ಸೇರಿದಂತೆ ಖಾಸಗಿ ಕಾರ್ಯಗಳಿಗೆ ಅನುಮತಿ ಅಗತ್ಯವಿಲ್ಲ. ಆದರೆ, ಈ ಸ್ಥಳಗಳನ್ನು ರಾಜಕೀಯ ಚಟುವಟಿಕೆಗಾಗಿ ಬಳಸಲು ಅವಕಾಶವಿಲ್ಲ. ಆದ್ದರಿಂದ ಚುನಾವಣೆ ಪ್ರಚಾರ ನಡೆಸದಂತೆ ನಿರ್ಬಂಧ ವಿಧಿಸಿ ಎಂದು ತಾಕೀತು ಮಾಡಿದರು.

    ಬರ ನಿರ್ಲಕ್ಷ್ಯ ವಹಿಸುವಂತಿಲ್ಲ: ಸಿ-ವಿಜಿಲ್ ತಂತ್ರಾಂಶದ ಮೂಲಕ ಬರುವ ದೂರಗಳ ಬಗ್ಗೆ ತಕ್ಷಣೆ ಸ್ಪಂದಿಸಬೇಕು. ಚುನಾವಣೆ ಕಾರ್ಯದ ನೆಪ ಹೇಳಿ, ಬರ ನಿರ್ವಹಣೆ ಹಾಗೂ ಕುಡಿಯುವ ನೀರಿನ ಕೆಲಸಗಳ ಕುರಿತು ನಿರ್ಲಕ್ಷ್ಯ ವಹಿಸುವಂತಿಲ್ಲ. ಯಾವುದೇ ಹೊಸ ಕಾಮಗಾರಿಗಳ ಉದ್ಘಾಟನೆ, ನಿರ್ಮಾಣ, ಶಂಕುಸ್ಥಾಪನೆಗಳಿಗೆ ಅವಕಾಶವಿಲ್ಲ. ಹೊಸ ಟೆಂಡರ್ ಕೂಡ ಕರೆಯುವಂತಿಲ್ಲ್ಲ. ಈಗಾಗಲೇ ಚಾಲ್ತಿಯಲ್ಲಿರುವ ಟೆಂಡರ್‌ಗಳ ಪ್ರಕ್ರಿಯೆ ಅಂತಿಮಗೊಳಿಸಿಕೊಳ್ಳಿ. ಆದರೆ, ಕಾರ್ಯಾದೇಶ ನೀಡುವಂತಿಲ್ಲ ಎಂದು ತಿಳಿಸಿದರು. ಜಿಪಂ ಸಿಇಒ ಎಸ್.ಜೆ.ಸೋಮಶೇಖರ್, ಎಸಿ ಎಂ.ಕಾರ್ತಿಕ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts