More

    ದೆಹಲಿಯಲ್ಲಿ ನ. 26 ಹಾಗೂ 27 ರಂದು ಬೃಹತ್ ಪ್ರತಿಭಟನೆ

    ಹಾಸನ: ಸುಗ್ರಿವಾಜ್ಞೆ ಮೂಲಕ ಸಾಲು ಸಾಲು ರೈತ ವಿರೋಧಿ ಕಾಯ್ದೆ ಜಾರಿಗೆ ತರುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ನ. 26 ಹಾಗೂ 27 ರಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ್ ಹೇಳಿದರು.

    ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆಗಳ ವಿರೋಧಿಸಿ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ನೀಡಬೇಕಿದೆ. ಸಾವಿರಾರು ರೈತರು ರಾಮ್‌ಲೀಲಾ ಮೈದಾನದಿಂದ ಪಾರ್ಲಿಮೆಂಟ್ ವರೆಗೆ ಮೆರವಣಿಗೆ ಮೂಲಕ ತೆರಳಿ ಮನವಿ ಸಲ್ಲಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು.

    ಬಹುಮತ ಇದೆ ಎಂದ ಮಾತ್ರಕ್ಕೆ ಕೇಂದ್ರ ಸರ್ಕಾರ ಸಾಕಷ್ಟು ತಪ್ಪುಗಳನ್ನು ಮಾಡುತ್ತಿದೆ. ಎಪಿಎಂಸಿ ಕಾಯ್ದೆಯಿಂದ ರೈತರಿಗೆ ಸ್ವಾತಂತ್ರೃ ಲಭಿಸುತ್ತದೆ, ಬೆಲೆ ದುಪ್ಪಟ್ಟಾಗುತ್ತದೆ ಎಂದು ಹೇಳಲಾಗುತ್ತಿದೆಯಾದರೂ ಅದೆಲ್ಲ ಕಟ್ಟುಕತೆ. ಎಪಿಎಂಸಿನಲ್ಲಿ ಕಾರ್ಪೋರೇಟ್ ಕಂಪನಿಗಳಿಗೆ ಯಾವುದೇ ತೆರಿಗೆ ವಿಧಿಸುವುದಿಲ್ಲ ಎಂಬ ನಿಯಮವೇ ರೈತರಿಗೆ ಬರೆ ಎಳೆಯಲಿದೆ ಎಂದರು.

    ಪ್ರಧಾನಿ ನರೇಂದ್ರ ಮೋದಿ ಬಡವರ ಬದಲಿಗೆ ಬಂಡವಾಳ ಶಾಹಿಗಳಿಗೆ ನೆರವಾಗುತ್ತಿದ್ದಾರೆ. ಪ್ರತಿ ವರ್ಷ ಖಾಸಗಿ ಕಂಪನಿಗಳಿಂದ ಜಮೆಯಾಗುತ್ತಿದ್ದ 1046 ಕೋಟಿ ರೂ. ತೆರಿಗೆಗೆ ವಿನಾಯಿತಿ ನೀಡಲಾಗಿದೆ. ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡುವುದನ್ನು ಮರೆತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರ ಭವಿಷ್ಯವನ್ನು ಅಂಧಕಾರಕ್ಕೆ ಕರೆದೊಯ್ಯುತ್ತಿದೆ ಎಂದು ಆರೋಪಿಸಿದರು.
    ರೈತ ಮುಖಂಡ ಬಾಬು ಹಾಗೂ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts