More

    ದೆಹಲಿ ಹೋರಾಟಕ್ಕೆ ನಾಲ್ಕು ತಿಂಗಳು: ಮಾ.26ರಂದು ಜಿಲ್ಲಾ ಬಂದ್

    ವಿಜಯವಾಣಿ ಸುದ್ದಿಜಾಲ ಕೋಲಾರ
    ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಹೋರಾಟ 4 ತಿಂಗಳು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಮಾ.26 ರಂದು ಭಾರತ್ ಬಂದ್ ಭಾಗವಾಗಿ ಜಿಲ್ಲಾ ಬಂದ್‍ಗೆ ಪ್ರಗತಿಪರ ಸಂಘಟನೆಗಳು ಕರೆ ನೀಡಿವೆ.
    ನಗರದ ನಚಿಕೇತ ನಿಲಯದ ಆವರಣದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಮಂಗಳವಾರ ಚರ್ಚೆ ನಡೆಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆನೀಡಿರುವ ಅಖಿಲ ಭಾರತ ಬಂದ್‍ನ ಭಾಗವಾಗಿ ರಾಜ್ಯದಲ್ಲಿ ಬಂದ್‍ಗೆ ಕರೆ ನೀಡಿರುವ ಕರ್ನಾಟಕ ರಾಜ್ಯ ಸಮಿತಿಯನ್ನು ಬೆಂಬಲಿಸುವ ನಿಟ್ಟಿನಲ್ಲಿ ಕೋಲಾರ ಜಿಲ್ಲಾ ಬಂದ್ ಯಶಸ್ವಿ ಮಾಡುವ ನಿಟ್ಟಿನಲ್ಲಿ ಒಮ್ಮತದ ತೀರ್ಮಾನ ತೆಗೆದುಕೊಳ್ಳಲಾಯಿತು.
    ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ತನಕ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟ ನಿಲ್ಲುವುದಿಲ್ಲ. ಹೋರಾಟದಲ್ಲಿ ಸುಮಾರು 200 ರೈತರು ಸಾವನ್ನಪ್ಪಿದ್ದರೂ ಕೇಂದ್ರ ಸರ್ಕಾರ ಈ ಬಗ್ಗೆ ಗಮನಹರಿಸದೆ ರೈತರ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿ ಹೋರಾಟದ ದಿಕ್ಕು ತಪ್ಪಿಸುತ್ತಿದೆ ಎಂದು ಖಂಡಿಸಿದ ಮುಖಂಡರು ಮಾ.24ರಿಂದ ಎಲ್ಲ ತಾಲೂಕುಗಳಲ್ಲಿ ಸಭೆಗಳನ್ನು ನಡೆಸಿ ಬಂದ್ ಯಶಸ್ವಿಗೊಳಿಸಲು ತೀರ್ಮಾನಿಸಿದರು.
    ಕೆಪಿಆರ್‍ಎಸ್ ಜಿಲ್ಲಾ ಕಾರ್ಯದರ್ಶಿ ಟಿ.ಎಂ ವೆಂಕಟೇಶ್, ಶ್ರೀರಾಮ್ ಆಲಹಳ್ಳಿ ವೆಂಕಟೇಶ್, ರೈತ ಸಂಘಟನೆಗಳ ಪದಾಧಿಕಾರಿಗಳಾದ ಕೆ. ನಾರಾಯಣಗೌಡ, ರಮೇಶ್, ಅಬ್ಬಣಿ ಶಿವಪ್ಪ, ಸಿಐಟಿಯು ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ವಿಜಯಕೃಷ್ಣ, ಜನಾಧಿಕಾರ ಸಂಘಟನೆಯ ಸಿ.ವಿ.ನಾಗರಾಜ್ ಇದ್ದರು

    ದೆಹಲಿ ಹೋರಾಟಕ್ಕೆ ನಾಲ್ಕು ತಿಂಗಳು: ಮಾ.26ರಂದು ಜಿಲ್ಲಾ ಬಂದ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts