More

    ದೇಗುಲಗಳಿಂದ ಶಾಂತಿ, ನೆಮ್ಮದಿ ಪ್ರಾಪ್ತಿ, ಸಿದ್ದಲಿಂಗ ಸ್ವಾಮೀಜಿ ಆಶೀರ್ವಚನ, ತಿಮ್ಮನಾಯ್ಕನಹಳ್ಳಿಯಲ್ಲಿ ದೇವಸ್ಥಾನ ಜೀರ್ಣೋದ್ಧಾರ

    ದಾಬಸ್‌ಪೇಟೆ ದೇವಸ್ಥಾನಗಳು ಮನುಷ್ಯರಿಗೆ ಶಾಂತಿ ನೆಮ್ಮದಿ ನೀಡುವ ಧಾರ್ಮಿಕ ಕೇಂದ್ರಗಳಾಗಿವೆ ಎಂದು ತುಮಕೂರಿನ ಸಿದ್ಧಗಂಗಾ ಮಠದ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿ ನುಡಿದರು.

    ಸೋಂಪುರ ಹೋಬಳಿ ತಿಮ್ಮನಾಯ್ಕನಹಳ್ಳಿಯಲ್ಲಿ ಬೊಮ್ಮಲಿಂಗೇಶ್ವರಸ್ವಾಮಿ ದೇವಸ್ಥಾನದ ಅಭಿವೃದ್ಧಿ ಸಂಘದಿಂದ ಬೊಮ್ಮಲಿಂಗೇಶ್ವರ, ಆದಿಶಕ್ತಿ ಏಳುಮಂದೆಮ್ಮ, ಭೈರವೇಶ್ವರ ದೇವಾಲಯಗಳ ಜೀರ್ಣೋದ್ಧಾರ ಮತ್ತು ವಿಮಾನ ಗೋಪುರ ಕಳಸ ಪ್ರತಿಷ್ಠಾಪನೆ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು. ಯಾವುದೇ ಗ್ರಾಮಕ್ಕೆ ಕಾಲಿಟ್ಟರೂ ಗ್ರಾಮಸ್ಥರ ಶಕ್ತಿಗನುಸಾರ ಒಂದು ದೇವಾಲಯದ ಜೀರ್ಣೋದ್ಧಾರ ದೃಶ್ಯಗಳನ್ನು ಕಾಣಬಹುದು. ಇದು ಜನ ದೇವರ ಬಗ್ಗೆ ಇಟ್ಟಿರುವ ನಂಬಿಕೆ ಹಾಗೂ ಭಕ್ತಿ ತೋರಿಸುತ್ತದೆ ಎಂದರು. ಗ್ರಾಮಗಳಲ್ಲಿನ ದೇಗುಲಗಳು ಸಮಾಜದಲ್ಲಿ ಶಾಂತಿ ನೆಮ್ಮದಿ ಸೌಹಾರ್ದದ ಪ್ರತೀಕವಾಗಿವೆ ಎಂದರು.

    ನಿರ್ಲಕ್ಷ್ಯದಿಂದ ಆಪತ್ತು: ನಮ್ಮ ಹಿರಿಯರು ನಡೆಸಿಕೊಂಡು ಬರುತ್ತಿದ್ದ ಸಂಪ್ರದಾಯಗಳನ್ನು ನಿರ್ಲಕ್ಷ ಮಾಡಿದ ಪರಿಣಾಮವಾಗಿ ಕರೊನಾದಂಥ ಕಾಯಿಲೆಗಳು ವಕ್ಕರಿಸುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ ಶ್ರೀಗಳು ನಮ್ಮ ಹಿರಿಯರು ಹಾಕಿಕೊಟ್ಟ ಧಾರ್ಮಿಕ ದಾರಿಯಲ್ಲಿ ನಡೆದರೆ ಲೋಕಕ್ಕೆ ಒಳ್ಳೆಯದಾಗುತ್ತದೆ ಎಂದರು.

    ಶಿವಗಂಗೆ ಮೇಲಣಗವಿಮಠದ ಶ್ರೀ ಮಲಯ ಶಾಂತಮುನಿ ಶಿವಾಚಾರ್ಯ ಸ್ವಾಮೀಜಿ, ಶಿವಗಂಗೆಯ ಹೊನ್ನಮ್ಮ ಗವಿ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಕಂಚುಗಲ್ ಬಂಡೆಮಠದ ಶಿವಾಚಾರ್ಯ ಸ್ವಾಮೀಜಿ, ಕಂಬಾಳು ಮಠದ ಶ್ರೀ ಚನ್ನವೀರ ಶಿವಾಚಾರ್ಯ ಸ್ವಾಮೀಜಿಗಳು ಭಕ್ತರಿಗೆ ಆಶೀರ್ವಚನ ನೀಡಿದರು.

    ತಾಪಂ ಮಾಜಿ ಉಪಾಧ್ಯಕ್ಷ ಬಸವರಾಜಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ರುದ್ರಯ್ಯ, ಸಮಾಜ ಸೇವಕ ಜಗದೀಶ್ ಚೌಧರಿ, ಬೊಮ್ಮಲಿಂಗೇಶ್ವರ ಸ್ವಾಮಿ ದೇವಸ್ಥಾನದ ಅಭಿವೃದ್ಧಿ ಸಂಘದ ಅಧ್ಯಕ್ಷ ಟಿ.ಎಂ.ಉಮಾಶಂಕರ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts