More

    ದೇವರಾಜ ಅರಸು ಜಾರಿಗೆ ತಂದ ಜನಪರ ಯೋಜನೆಗಳು ಅಮರ

    ಸೊರಬ: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ನಾಡು ಕಂಡ ಧೀಮಂತ, ಮೇಧಾವಿ ರಾಜಕಾರಣಿ. ಹಿಂದುಳಿದ ವರ್ಗಗಳ ಪರವಾಗಿ ಕಾಳಜಿ ಹೊಂದಿದ್ದರು. ಅವರು ಮಾಡಿರುವ ಕಾರ್ಯಗಳು ಅಚ್ಚಳಿಯದೆ ಉಳಿದಿವೆ ಎಂದು ಪುರಸಭೆ ಅಧ್ಯಕ್ಷ ಈರೇಶ್ ಮೇಸ್ತ್ರಿ ಹೇಳಿದರು.
    ತಾಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
    ಅರಸು ಅವರು ಭೂ ಸುಧಾರಣಾ ಕಾಯ್ದೆ, ಕರ್ನಾಟಕ ಋಣಮುಕ್ತ ಕಾಯ್ದೆ ಜಾರಿಗೆ ತಂದು ಬಡವರಿಗೆ ಅನುಕೂಲ ಮಾಡಿಕೊಟ್ಟಿದ್ದರು. ಅವರು ಈ ನಾಡಿಗೆ ಕೊಟ್ಟಂತಹ ಸೇವೆ, ತಂದ ಕಾರ್ಯಕ್ರಮ ಯಾರೂ ಮರೆಯಲು ಸಾಧ್ಯವಿಲ್ಲ ಎಂದರು.
    ಈಡಿಗ ಸಮಾಜದ ತಾಲೂಕು ಅಧ್ಯಕ್ಷ ಕೆ.ಅಜ್ಜಪ್ಪ ಕಾಸರಗುಪ್ಪೆ ಮಾತನಾಡಿ, ನಾಡು ಕಂಡ ಅಪರೂಪದ ವ್ಯಕ್ತಿತ್ವದ ರಾಜಕಾರಣಿ ದೇವರಾಜ ಅರಸು. ಅವರ ಆದರ್ಶಗಳು ಮತ್ತು ರಾಜಕೀಯ ಕ್ಷೇತ್ರದಲ್ಲಿ ಕೈಗೊಂಡ ದಿಟ್ಟ ನಿಲುವುಗಳು ಮುಂದಿನ ಪೀಳಿಗೆಗೆ ಹಾಗೂ ಗ್ರಾಮೀಣ ಭಾಗದ ಪ್ರತಿಯೊಬ್ಬರಿಗೂ ತಲುಪಬೇಕು. ಈ ನಿಟ್ಟಿನಲ್ಲಿ ಅರಸು ಅವರ ಜನ್ಮದಿನ ಆಚರಣೆಯನ್ನು ಸರ್ಕಾರ ಕೇವಲ ಜಿಲ್ಲಾ ಕೇಂದ್ರದಲ್ಲಿ ಅದ್ಧೂರಿಯಾಗಿ ಆಚರಿಸಿದರೆ ಸಾಲದು, ಗ್ರಾಮೀಣ ಮಟ್ಟದಲ್ಲೂ ಆಚರಿಸಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts