More

    ದೇವಾಂಗ ಸಮಾಜದಿಂದ ಪ್ರತಿಭಾ ಪುರಸ್ಕಾರ, 150ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸನ್ಮಾನ

    ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ

    ರಾಜ್ಯ ದೇವಾಂಗ ಸಂಘ ಹಾಗೂ ದೇವಾಂಗ ಕೇಂದ್ರೀಯ ಸಮಿತಿ ಸಹಯೋಗದಲ್ಲಿ ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗಣ್ಯರಿಗೆ ಸನ್ಮಾನಿಸುವ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಸೆ. 18ರಂದು ಬೆಳಗ್ಗೆ 10.30ಕ್ಕೆ ಇಲ್ಲಿಯ ಗೋಕುಲ ರಸ್ತೆ ಚವ್ಹಾಣ್ ಗ್ರೀನ್ ಗಾರ್ಡನ್​ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ನಾಗೇಶ ಬಾಪರೆ ತಿಳಿಸಿದರು.

    ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 30 ಜಿಲ್ಲೆಗಳ ಸುಮಾರು 150ಕ್ಕೂ ಹೆಚ್ಚು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಪ್ರದೀಪ ಶೆಟ್ಟರ್, ಕೇಶವ ಪ್ರಸಾದ್, ಬೆಂಗಳೂರು ನೃಪತುಂಗ ವಿವಿ ಉಪಕುಲಪತಿ ಶ್ರೀನಿವಾಸ ಬಳ್ಳಿ, ದೇವಾಂಗ ಬೆಂಗಳೂರು ಸಂಘದ ಅಧ್ಯಕ್ಷ ಡಾ. ಜಿ. ರಮೇಶ್, ವಾಯವ್ಯ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಬಸವರಾಜ ಕೇಲಗಾರ, ದತ್ತಾತ್ರೇಯ ಗಂಜಿ, ಮಂಜುನಾಥ ಡೊಂಬರ ಸೇರಿ ಹಲವರನ್ನು ಗೌರವಿಸಲಾಗುವುದು ಎಂದರು.

    ಹಂಪಿ ಹೇಮಕೂಟ ಗಾಯತ್ರಿಪೀಠ ಮಹಾಸಂಸ್ಥಾನದ ಶ್ರೀದಯಾನಂದಪುರಿ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಸಂಘದ ರಾಜ್ಯಾಧ್ಯಕ್ಷ ರವೀಂದ್ರ ಕಲಬುರ್ಗಿ ಅಧ್ಯಕ್ಷತೆ ವಹಿಸುವರು. ಮಾಜಿ ಸಿಎಂ ಜಗದೀಶ ಶೆಟ್ಟರ್, ಜವಳಿ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ರಾಜ್ಯಸಭೆ ಸದಸ್ಯ ಕೆ. ನಾರಾಯಣ ಇತರರು ಪಾಲ್ಗೊಳ್ಳುವರು ಎಂದರು.

    ಗೋಷ್ಠಿಯಲ್ಲಿ ಡಾ. ಕೆ.ಜಿ. ಬ್ಯಾಕೋಡಿ, ರವೀಂದ್ರ ಪಾಟೀಲ, ಮುಕುಂದಗೌಡ್ರ ಗುಗ್ಗರಿ, ದೀಪಕ್ ಕರಮರಿ, ವೀರಣ್ಣ ನಿಂಬರಗಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts