More

    ದೇಶಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕೊಡುಗೆ ಅಪಾರ

    ಬೆಳಗಾವಿ: ದೇಶದ ಸ್ವಾತಂತ್ರ್ಯಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಾಣ ತ್ಯಾಗ ಮಾಡಿದ್ದಾನೆ. ದೇಶಕ್ಕೆ ರಾಯಣ್ಣನ ಕೊಡುಗೆ ಅಪಾರ. ರಾಯಣ್ಣನ ಜೀವನ ಚರಿತ್ರೆ ಯುವಪೀಳಿಗೆಯ ಪ್ರೇರಣೆ ಹಾಗೂ ಶಕ್ತಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.

    ನಗರದ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನ ಕಾರ್ಯಕ್ರಮದಲ್ಲಿ ಮಾತನಾಡಿ, ಕಿತ್ತೂರು ಸಂಸ್ಥಾನದ ರಕ್ಷಣೆಗೆ ನಿಂತ ರಾಯಣ್ಣ ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾನೆ. ಸ್ವಾತಂತ್ರ್ಯ ಹೋರಾಟಕ್ಕೆ ಅನೇಕ ಮಹನೀಯರು ಪ್ರಾಣತ್ಯಾಗ ಮಾಡಿದ್ದು, ಅವರುಗಳಲ್ಲಿ ರಾಯಣ್ಣನ ಪಾತ್ರ ಮಹತ್ವದ್ದಾಗಿದೆ ಎಂದರು. ಕಿತ್ತೂರು ನಾಡನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ಸಂಗೊಳ್ಳಿ ರಾಯಣ್ಣನಿಗೆ ಸಲ್ಲುತ್ತದೆ. ನಾಡಿಗೆ ರಾಯಣ್ಣನ ಕೊಡುಗೆ ಅಪಾರವಾಗಿದ್ದು, ಭವಿಷ್ಯದಲ್ಲಿ ಎಲ್ಲ ಯುವ ಪೀಳಿಗೆಯಲ್ಲಿ ರಾಯಣ್ಣನ ನೆನಪು ಶಾಶ್ವತವಾಗಿ ಉಳಿಯಲಿದೆ. ರಾಯಣ್ಣನ ಹೆಸರು, ಜನ್ಮದಿನ, ಹುತಾತ್ಮ ದಿನ ಕೇವಲ ಆಚರಣೆಗೆ ಮಾತ್ರ ಸೀಮಿತವಲ್ಲ. ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಸೈನಿಕ ಶಾಲೆ ನಿರ್ಮಾಣ ಮಾಡಲಾಗಿದೆ. ಸಿಎಂ ಬೊಮ್ಮಾಯಿ ಅವರು ಶೀಘ್ರ ಸೈನಿಕ ಶಾಲೆ ಲೋಕಾರ್ಪಣೆ ಮಾಡಲಿದ್ದಾರೆ ಎಂದರು. ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಇತರರಿದ್ದರು.

    ಹಿರೇಬಾಗೇವಾಡಿ ವರದಿ: ಸ್ಥಳೀಯ ಉಪ-ತಹಸೀಲ್ದಾರ್ ಕಚೇರಿಯಲ್ಲಿ ಗಣರಾಜೋತ್ಸವ ಆಚರಿಸಲಾಯಿತು. ಉಪತಹಸೀಲ್ದಾರ್ ವಿಜಯ ವಾಲಿಕಾರ, ಕಂದಾಯ ನಿರೀಕ್ಷಕ
    ಶಶಿಧರ ಗುರವ, ವಿಎ ಅನಿಲ ಕಮ್ಮಾರ, ನಿಂಗಪ್ಪ ರೊಟ್ಟಿ, ಅರುಣ ದೇಸಾಯಿ, ಸಾವಿತ್ರಿ ಇಂಚಲ, ನೀಲಾವತಿ ಅರಳಿಕಟ್ಟಿ, ಮೀರಾಸಾಬ್ ನದಾಫ್ ಇದ್ದರು. ಪೊಲೀಸ್ ಠಾಣೆಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಪಿಐ ವಿಜಯಕುಮಾರ ಸಿನ್ನೂರ, ಪಿಎಸ್‌ಐಗಳಾದ ಶಶಿಕುಮಾರ ಕರಾಳೆ, ಬಿ.ಆರ್.ಮುತ್ನಾಳ, ಸಿಬ್ಬಂದಿ ಇದ್ದರು. ಸಮುದಾಯ ಆರೋಗ್ಯ ಕೇಂದ್ರ, ಸರ್ಕಾರಿ ಮತ್ತು ಖಾಸಗಿ ಶಾಲೆ-ಕಾಲೇಜ್‌ಗಳಲ್ಲಿ, ರೈತ ಸೇವಾ ಸಹಕಾರಿ ಸಂಘ, ಎಪಿಎಂಸಿ, ರೈತ ಸಂಪರ್ಕ ಕೇಂದ್ರದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts