More

    ದೇಶದಲ್ಲಿ ಗೋವಿಗೆ ಪ್ರಮುಖ ಸ್ಥಾನ

    ಹಾವೇರಿ: ವಿಧಾನ ಸಭೆಯಲ್ಲಿ ಗೋಹತ್ಯೆ ಪ್ರತಿಬಂಧಕ ಮಸೂದೆಗೆ ಅಂಗೀಕಾರ ದೊರೆತ ಹಿನ್ನೆಲೆಯಲ್ಲಿ ನಗರದ ಸುಭಾಸ ವೃತ್ತದಲ್ಲಿ ಗುರುವಾರ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಗೋಪೂಜೆ ಮಾಡಿ, ಸಿಹಿಹಂಚಿ ಸಂಭ್ರಮಿಸಿದರು.

    ಬಣ್ಣದಮಠದ ಅಭಿನವ ರುದ್ರಚನ್ನಮಲ್ಲಿಕಾರ್ಜುನ ಸ್ವಾಮೀಜಿ, ಹೊಸಮಠದ ಶಿವಬಸವಶಾಂತಲಿಂಗ ಸ್ವಾಮೀಜಿ, ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಿದ ಸರ್ಕಾರಕ್ಕೆ ಅಭಿನಂದಿಸಿದರು.

    ಬಣ್ಣದಮಠದ ಅಭಿನವ ರುದ್ರಚನ್ನಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ರಾಜ್ಯ ಸರ್ಕಾರ ನುಡಿದಂತೆ ನಡೆದಿದೆ. ಗೋವು ಸನಾತನ ಧರ್ಮದ ಮೂಲ ಸ್ಥಂಬಗಳಲ್ಲಿ ಮುಖ್ಯವಾದುದು. ಗೋವಧೆ ಮಾಡುವ ಮೂಲಕ ದೇಶವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆದಿತ್ತು. ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿದ್ದು ಸಂತಸ ತಂದಿದೆ ಎಂದರು.

    ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಮಾತನಾಡಿ, ಮುಖ್ಯಮಂತ್ರಿಗಳು ಚುನಾವಣೆ ಪೂರ್ವದಲ್ಲಿ ಜನರಿಗೆ ನೀಡಿದ ಆಶ್ವಾಸನೆಯನ್ನು ಈಡೇರಿಸಿದ್ದಾರೆ. ಸರ್ಕಾರಕ್ಕೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

    ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿ, ಗೋಹತ್ಯೆಯನ್ನು ವಿರೋಧಿಸಿ ಹತರಾದ ಹಾಗೂ ಹತ್ಯೆಯ ವಿರುದ್ಧ ಹೋರಾಟ ಮಾಡಿದ ಕಾರ್ಯಕರ್ತರಿಗೆ ಕೋಟಿ ಕೋಟಿ ನಮನಗಳನ್ನು ಸಲ್ಲಿಸುತ್ತೇನೆ ಎಂದರು.

    ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ ಮುಳ್ಳೂರ, ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ನಂಜುಂಡೇಶ ಕಳ್ಳೇರ, ಅಭಿಷೇಕ ಗುಡಗೂರ, ಪ್ರಶಾಂತ ಕೋಡಿತ್ಕರ, ಕಿರಣ ಅಂಗಡಿ, ನಗರಸಭೆ ಸದಸ್ಯೆ ಚನ್ನಮ್ಮ ಬ್ಯಾಡಗಿ, ಶಿವಲಿಂಗಪ್ಪ ಕಲ್ಯಾಣಿ, ಪಾರ್ವತಿ ಪಾಟೀಲ, ಚನ್ನಮ್ಮ ಪಾಟೀಲ, ರೋಹಿಣಿ ಪಾಟೀಲ, ಚಂದ್ರಲೇಖಾ ಕೊಟಗಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts