More

    ದೇಶದ ಅಭಿವೃದ್ಧಿ ಕಂಡು ಹಲವರು ಬಿಜೆಪಿಗೆ

    ಬಾಳೆಹೊನ್ನೂರು: ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಕಂಡು ವಿವಿಧ ಪಕ್ಷಗಳ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಹೇಳಿದರು. ಸಮೀಪದ ಖಾಂಡ್ಯ ಹೋಬಳಿಯ ಒಳಗೋಡು ಗ್ರಾಮದಲ್ಲಿ ಗುರುವಾರ ಕಾಂಗ್ರೆಸ್ ಹಾಗೂ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು.

    ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳು ಪ್ರತಿಯೊಬ್ಬರಿಗೂ ಮಾದರಿಯಾಗಿವೆ. ಇವುಗಳನ್ನು ಮೆಚ್ಚಿ ಸಾವಿರಾರು ಕಾರ್ಯಕರ್ತರು ಬಿಜೆಪಿಗೆ ಸೇರುತ್ತಿದ್ದಾರೆ. ದೇಶ ಮೊದಲು ಎಂದು ಕಾರ್ಯನಿರ್ವಹಿಸುವ ಏಕೈಕ ಪಕ್ಷ. ಮುಂದಿನ ಬಾರಿಯೂ ಬಿಜೆಪಿ ಅಧಿಕಾರ ಹಿಡಿಯುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಶೃಂಗೇರಿ ಕ್ಷೇತ್ರದಲ್ಲಿ ಕಳೆದ ನಾಲ್ಕೂವರೆ ವರ್ಷಗಳಿಂದ ಅಭಿವೃದ್ಧಿ ಶೂನ್ಯವಾಗಿದೆ. ರಾಜ್ಯ ಸರ್ಕಾರ ನೂರಾರು ಕೋಟಿ ರೂ. ಅನುದಾನ ನೀಡುತ್ತಿದ್ದರೂ ಕ್ಷೇತ್ರದಲ್ಲಿ ಅದು ಸದ್ಬಳಕೆ ಆಗುತ್ತಿಲ್ಲ ಎಂದು ದೂರಿದರು. ಬಿಜೆಪಿ ಮುಖಂಡ ಟಿ.ಎಂ.ಉಮೇಶ್ ಕಲ್ಮಕ್ಕಿ ಮಾತನಾಡಿ, ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್ ಅವರು ಸರ್ಕಾರದೊಂದಿಗೆ ಸಮನ್ವಯ ಸಾಧಿಸಿ ಕ್ಷೇತ್ರಕ್ಕೆ ನೂರಾರು ಕೋಟಿ ರೂ. ಅನುದಾನ ತರುತ್ತಿದ್ದಾರೆ. ಆದರೆ ಶಾಸಕರು ಅದನ್ನು ಸಮರ್ಪಕವಾಗಿ ಬಳಸುತ್ತಿಲ್ಲ. ಕಾಂಗ್ರೆಸ್, ಜೆಡಿಎಸ್​ನಲ್ಲಿ ಸ್ವಜನ ಪಕ್ಷಪಾತ, ಕಡೆಗಣನೆಯಿಂದ ಕಾರ್ಯಕರ್ತರು ಬೇಸತ್ತಿದ್ದಾರೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts