More

    ದೇಶದ ಪ್ರಜಾತಂತ್ರ ವ್ಯವಸ್ಥೆಗೆ ಅಪಮಾನ

    ಸೈದಾಪುರ (ಯಾದಗಿರಿ): ಕುತಂತ್ರದಿAದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದು ದೇಶದ ಪ್ರಜಾತಂತ್ರ ವ್ಯವಸ್ಥೆಗೆ ಬಗೆದ ಅಪಮಾನ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

    ಗುರುಮಠಕಲ್ ವಿಧಾನಸಭೆ ಕ್ಷೇತ್ರದ ಸೈದಾಪುರ ಪಟ್ಟಣದಲ್ಲಿ ಶನಿವಾರ ಆಯೋಜಿಸಿದ್ದ ಬ್ಲಾಕ್ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಅಡಿಗಲ್ಲು ಮತ್ತು ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ತುಚ್ಛವಾಗಿ ಮಾತನಾಡಿದ್ದರ ಕುರಿತ ಪ್ರಕರಣಕ್ಕೆ ಸಂಬAಧಿಸಿದAತೆ ಸಂಸದ ಸ್ಥಾನದಿಂದ ಅನರ್ಹಗೊಳಿಸಿದ್ದು ಸರಿಯಲ್ಲ. ದೇಶದಲ್ಲಿನ ಕಪ್ಪುಹಣ, ಅದಾನಿ, ಅಂಬಾನಿ ಬಗ್ಗೆ ಲೋಕಸಭೆಯಲ್ಲಿ ಪದೇಪದೆ ಮಾತನಾಡಿದ್ದನ್ನು ಸಹಿಸದೆ ಅನರ್ಹ ತಂತ್ರ ಹೆಣೆಯಲಾಗಿದೆ ಎಂದು ವಾಗ್ದಾಳಿ ನಡೆಸಿದರು.

    ಇಡಿ, ಐಟಿ ಹಾಗೂ ಸರ್ಕಾರದ ಸಂಸ್ಥೆಗಳನ್ನು ಬಳಸಿಕೊಂಡು ಕಾಂಗ್ರೆಸ್ ನಾಯಕರನ್ನು ಹೆದರಿಸುವಂಥ ಕೆಲಸ ಬಿಜೆಪಿ ಸರ್ಕಾರ ವ್ಯವಸ್ಥಿತವಾಗಿ ಮಾಡುತ್ತಿದೆ. ೨೦೧೪ರಲ್ಲಿ ಅದಾನಿ ಆಸ್ತಿ ೩೪೦೦ ಕೋಟಿ ಇದ್ದದ್ದು ಈಗ ೧೦ ಲಕ್ಷ ಕೋಟಿಯಾಗಿದೆ. ರೈಲ್ವೆ ಸೇರಿ ಸರ್ಕಾರಿ ಸಂಸ್ಥೆಗಳನ್ನು ಖರೀದಿಸಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಅದಾನಿಗೆ ಆದಾಯ ಎಲ್ಲಿಂದು ಬಂತು ಎಂಬುದು ನಮ್ಮ ಪ್ರಶ್ನೆ. ಸಂಸತ್ತಿನಲ್ಲಿ ಕೇಳಬೇಕೆಂದರೆ ಮಾತನಾಡಲು ಅವಕಾಶವೇ ಕೊಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts