ದೇಶಭಕ್ತಿಯ ಪ್ರತೀಕ ಹರ್‌ಘರ್ ತಿರಂಗಾ

10 YERRISWAMY 02
Published on

ಬಳ್ಳಾರಿ : ಸ್ವಾತಂತ್ರ ದಿನಾಚರಣೆ ಹಿನ್ನೆಲೆಯಲ್ಲಿ ಪ್ರತಿ ಮನೆ-ಮನೆ ಮೇಲೂ ರಾಷ್ಟಧ್ವಜವನ್ನು ಹಾರಿಸುವ ಮೂಲಕ ಹರ್‌ಘರ್ ತಿರಂಗಾ ಅಭಿಯಾನವನ್ನು ಯಶ್ವಸಿಗೊಳಿಸಿ ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಕರೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ.ಆಜಯ್ ನಾಗಭೂಷಣ್‌ರಾವ್ ಅವರೊಂದಿಗೆ ನಡೆದ ವಿಡಿಯೋ ಸಂವಾದ ಕಾರ್ಯಕ್ರಮದ ಬಳಿಕ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ದೇಶನದಂತೆ ಹರ್ ಘರ್ ತಿರಂಗಾ ಅಭಿಯಾನವನ್ನು ಆ.13 ರಿಂದ ಆ.15 ರ ಹಮ್ಮಿಕೊಳ್ಳಲಾಗಿದೆ. ಕಳೆದ ಬಾರಿಯೂ ಜಿಲ್ಲೆಯಾದ್ಯಂತ ಈ ಅಭಿಯಾನ ಯಶಸ್ವಿಯಾಗಿತ್ತು. ಈ ಬಾರಿಯೂ ಹರ್‌ಘರ್ ತಿರಂಗಾ ಅಭಿಯಾನ ಮುಂದುವರಿದಿದೆ. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ತಮ್ಮ ಮನೆಗಳ ಮೇಲೆ ರಾಷ್ಟಧ್ವಜವನ್ನು ಸಂಜೆ ಸೂರ್ಯಾಸ್ತದವರೆಗೆ ನಿರಂತರವಾಗಿ ಧ್ವಜ ಹಾರಿಸಬೇಕು. ಅಭಿಯಾನದಲ್ಲಿ ಭಾಗವಹಿಸಿದ ಸಾರ್ವಜನಿಕರು ತಮ್ಮ ಸೆಲ್ಫಿಗಳನ್ನು ನಲ್ಲಿ ಹಂಚಿಕೊಳ್ಳಬಹುದು. ಆ. 12 ರಂದು ಸಂಜೆ 06.30 ಗಂಟೆಗೆ ನಗರದ ಸಾಂಸ್ಕೃತಿಕ ಸಮುಚ್ಛಯ ಆವರಣದ ನಾಡೋಜ ಸುಭದ್ರಮ್ಮ ಮನ್ಸೂರ್ ಬಯಲು ರಂಗಮಂದಿರದಲ್ಲಿ ದೇಶಪ್ರೇಮ ಬಿಂಬಿಸುವ ತಿಂಗಳ ಸೊಬಗು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಆ.13 ರಂದು ಬೆಳಗ್ಗೆ 06.30 ಗಂಟೆಗೆ ಐತಿಹಾಸಿಕ ಬೆಟ್ಟ (ಕೋಟೆ) ಮೇಲೆ ಧ್ವಜಾರೋಹಣಾ ನೆರವೇರಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net