More

    ದೊಡ್ಡಕುರುಗೋಡು ಮುಖ್ಯರಸ್ತೆಗೆ ಹರಿಯುತ್ತಿದೆ ಕಾರ್ಖಾನೆ ಕಲುಷಿತ ನೀರು!

    ಗೌರಿಬಿದನೂರು: ತಾಲೂಕಿನ ಕುಡುಮಲಕುಂಟೆ ಕೈಗಾರಿಕೆ ಪ್ರದೇಶದ ಕಾರ್ಖಾನೆಗಳ ಕಲುಷಿತ ನೀರು ಮುಖ್ಯರಸ್ತೆ ಪಕ್ಕದ ಕಾಲುವೆಯಲ್ಲಿ ಹರಿಯುತ್ತಿದ್ದು, ಒಂದು ವೇಳೆ ಸಮೀಪದಲ್ಲಿರುವ ದೊಡ್ಡಕುರಗೋಡು ಕೆರೆಗೆ ಈ ನೀರು ಹರಿದರೆ ಜೀವಜಲವೇ ವಿಷವಾಗುವ ಆತಂಕ ಎದುರಾಗಿದೆ.

    ಕಲುಷಿತ ನೀರು ಹರಿಯುತ್ತಿರುವುದರಿಂದ ದುರ್ನಾತ ಬೀರುತ್ತಿದೆ. ಮೂಗು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಸಾಯನಿಕ ಮಿಶ್ರಿತ ನೀರನ್ನು ಮೂಖಪ್ರಾಣಿಗಳು ಸೇವಿಸುವುದರಿಂದ ಅವುಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಸ್ಥಳೀಯರು ಆಲವತ್ತುಕೊಂಡಿದ್ದಾರೆ.

    ಕಲುಷಿತ ನೀರಿನಿಂದ ಅನಾಹುತಗಳು ಸಂಭವಿಸುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ಇಲ್ಲವಾದಲ್ಲಿ ಮುಂದಾಗುವ ನಷ್ಟಗಳಿಗೆ ಅಧಿಕಾರಿಗಳೇ ಹೊಣೆಗಾರರಾಗಬೇಕಾಗುತ್ತದೆ.
    ಕುಮಾರಸ್ವಾಮಿ ದೊಡ್ಡಕುರುಗೋಡು ವಾಸಿ

    ಯಾವ ಕಾರ್ಖಾನೆಯಿಂದ ಕಲುಷಿತ ನೀರು ರಸ್ತೆಗೆ ಹರಿಸಲಾಗುತ್ತಿದೆ ಎಂಬುದನ್ನು ಪತ್ತೆಹಚ್ಚಿ ಕ್ರಮ ಜರುಗಿಸುವಂತೆ ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಮೌನವಾಗಿದ್ದಾರೆ ಎಂದು ದೂರಿರುವ ಗ್ರಾಮಸ್ಥರು, ಕೂಡಲೇ ಮೇಲಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡದ ಕಾರ್ಖಾನೆ ವಿರುದ್ಧ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

    ತಾಲೂಕಿನ ಕುಡುಮಲಕುಂಟೆ ಕೈಗಾರಿಕಾ ವಲಯದ ಕಾರ್ಖಾನೆಯಿಂದ ತ್ಯಾಜ್ಯ ನೀರು ರಸ್ತೆಗೆ ಹರಿಯುತ್ತಿರುವ ಕುರಿತು ಸಾರ್ವಜನಿಕರು ದೂರು ನೀಡಿದ್ದು ಈ ಬಗ್ಗೆ ಪರಿಶೀಲನೆ ಮಾಡಿ ವರದಿ ನೀಡುವಂತೆ ಹಾಗೂ ತ್ಯಾಜ್ಯ ನೀರು ರಸ್ತೆಗೆ ಬಿಡುತ್ತಿರುವ ಕಾರ್ಖಾನೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಪಂ ಪಿಡಿಒಗೆ ಆದೇಶಿಸಿದ್ದೇನೆ.
    ಮುನಿರಾಜು, ತಾಪಂ ಇಒ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts