More

    ದೊಡ್ಡಹೆಜ್ಜೂರು ಗ್ರಾಪಂ ಕೆಡಿಪಿ ಸಭೆ

    ಹನಗೋಡು: ದೊಡ್ಡಹೆಜ್ಜೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮುದಗನೂರು ಸುಭಾಷ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಕೆಡಿಪಿ ಸಭೆ ನಡೆಯಿತು.

    ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ , ದೊಡ್ಡಹೆಜ್ಜೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಧಾಕರ್ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯ ನೀರು ಗಂಟಿಗಳು ನೀರಿನ ತೊಟ್ಟಿಗಳನ್ನು ಆಗಾಗ ಸ್ವಚ್ಛಗೊಳಿಸುತ್ತಿರುವುದರಿಂದ ಯಾವುದೇ ರೀತಿಯ ರೋಗರುಜಿನಗಳು ಕಾಣಿಸಿಕೊಂಡಿಲ್ಲ. ಆದರೆ ಅಂಗನವಾಡಿ ನೌಕರರು ಆಶಾ ಕಾರ್ಯಕರ್ತೆಯರೊಂದಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚು ಗಿರಿಜನ ಹಾಡಿಗಳಿದ್ದು, ಇಲ್ಲಿ ಬಾಲ್ಯ ವಿವಾಹ ನಡೆಯುತ್ತಿದೆ. ಇದನ್ನು ತಡೆಗಟ್ಟಲು ಅಂಗನವಾಡಿ ನೌಕರರ ಸಹಕಾರ ಅಗತ್ಯವಾಗಿದೆ. ಅಧ್ಯಕ್ಷರು ಈ ಬಗ್ಗೆ ಪರಿಶೀಲಿಸಬೇಕು ಎಂದು ಮನವಿ ಮಾಡಿದರು.

    ಸೆಸ್ಕ್‌ನ ಪವರ್‌ಮನ್ ಪೆಂಜಳ್ಳಿ ರಾಜು ಅವರು ಕರ್ತವ್ಯದ ವೇಳೆಯೂ ಮದ್ಯಪಾನ ಮಾಡಿರುತ್ತಾರೆ. ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಇವರನ್ನು ಬೇರೆ ಕಡೆ ವರ್ಗಾವಣೆ ಮಾಡಿ ಎಂದು ಸಭೆಯಲ್ಲಿ ಭಾಗವಹಿಸಿದ್ದ ನಾಗರಿಕರು ಆಗ್ರಹಿಸಿದರು. ಇದಕ್ಕೆ ಸ್ಪಂದಿಸಿದ ಅಧ್ಯಕ್ಷರು, ಇವರನ್ನು ಬೇರೆ ಕಡೆ ವರ್ಗಾವಣೆ ಮಾಡಲು ಹಿರಿಯ ಅಧಿಕಾರಿಗಳಿಗೆ ತಿಳಿಸುವಂತೆ ಇಂಜಿನಿಯರಿಗೆ ಸೂಚಿಸಿದರು.

    ಕೃಷಿ ಅಧಿಕಾರಿ ವಿನಯ್ ಮಾತನಾಡಿ, ಸಬ್ಸಿಡಿ ದರದಲ್ಲಿ ಭತ್ತ, ರಾಗಿ ಬಿತ್ತನೆ ಬೀಜಗಳು, ಲಘು ಪೋಷಕಾಂಶಗಳು ಹಾಗೂ ಕೀಟನಾಶಕಗಳನ್ನು ನೀಡಲಾಗುತ್ತಿದೆ. ರೈತರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.

    ಅರಣ್ಯ ಇಲಾಖೆಯ ಡಿಆರ್‌ಎಫ್‌ಒ ಚಂದ್ರೇಶ್ ಮಾತನಾಡಿ, ಇಲಾಖೆ ವತಿಯಿಂದ ಸೋಲಾರ್ ಹಾಗೂ ಕೊಟ್ಟಿಗೆ ನಿರ್ಮಿಸಿಕೊಳ್ಳಲು ಶೇ.50ರಷ್ಟು ಸಹಾಯಧನ ನೀಡಲಾಗುತ್ತಿದೆ ಎಂದು ಹೇಳಿದರು.

    ಭರತವಾಡಿಯಲ್ಲಿ ಸ್ಮಶಾನ ಜಾಗ ಒತ್ತುವರಿಯಾಗಿದ್ದು, ಕೂಡಲೇ ಕಂದಾಯ ಇಲಾಖೆ ಅಧಿಕಾರಿಗಳು ತೆರವಿಗೆ ಕ್ರಮವಹಿಸಬೇಕು ಎಂದು ಅಧ್ಯಕ್ಷರು ಸೂಚಿಸಿದರು.

    ಕೃಷಿ, ಆರೋಗ್ಯ, ವಿದ್ಯುತ್, ಅರಣ್ಯ, ಶಿಕ್ಷಣ, ಕಂದಾಯ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು. ಗ್ರಾಮ ಪಂಚಾಯಿತಿ ಮಟ್ಟದ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕೆಂದು ಅಧ್ಯಕ್ಷ ಸುಭಾಷ್ ಅಧಿಕಾರಿಗಳಿಗೆ ಸೂಚಿಸಿದರು.
    ಪಿಡಿಒ ಮಂಜುನಾಥ್, ಉಪಾಧ್ಯಕ್ಷೆ ಯಶೋದಾ, ಸದಸ್ಯರಾದ ವೆಂಕಟೇಶ್, ಗಣೇಶ್, ಬಸವಣ್ಣ, ಗೀತಾ, ಲಕ್ಷ್ಮೀ, ಸಾವಿತ್ರಮ್ಮ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts