More

    ದೌರ್ಜನ್ಯ ಕಂಡರೆ ತಕ್ಷಣ ಕ್ರಮ ಕೈಗೊಳ್ಳಿ

    ಯಾದಗಿರಿ: ಮಕ್ಕಳ ಮೇಲಿನ ಶೋಷಣೆ ತಪ್ಪಿಸುವುದು, ಮಕ್ಕಳ ಸ್ನೇಹಿ ವಾತಾವರಣ ನಿಮರ್ಿಸುವುದು ಹಾಗೂ ಕಾನೂನಿನ ಸಂಘರ್ಷಕ್ಕೆ ಒಳಪಟ್ಟವರಿಗೆ ಅಗತ್ಯವಿರುವ ಸೂಕ್ತ ಮಾರ್ಗದರ್ಶನ ಮಾಡುವುದು ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ., ತಿಳಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಮಕ್ಕಳ ( ಕಲ್ಯಾಣ) ರಕ್ಷಣಾ ಸಮಿತಿಯ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಮಕ್ಕಳಿಗೆ ಕ್ರಮಬದ್ದ ರೀತಿಯಲ್ಲಿ ಪಾಲನೆ ಮತ್ತು ಪೋಷಣೆ ಒದಗಿಸಿ, ದೌರ್ಜನ್ಯ ಕಂಡುಬಂದರೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು. ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಅವರನ್ನು ಮರಳಿ ತರಗತಿಗಳಿಗೆ ಕರೆ ತರಲು ಅಗತ್ಯ ಕ್ರಮ ವಹಿಸಬೇಕು ಎಂದು ಸೂಚಿಸಿದರು.

    ಬಾಲ್ಯವಿವಾಹ ಪ್ರಕರಣ ಕಂಡುಬಂದಾಗ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಡೆಯಾಜ್ಞೆ ತರಬೇಕು. ಸಿಡಿಪಿಒಗಳು ತಕ್ಷಣವೇ ಮುಂದಾಳತ್ವ ವಹಿಸಿಕೊಂಡು ಸಂಬಂಧಿಸಿದ ಇಲಾಖೆಗಳ ಸಮನ್ವಯದ ಜತೆಗೆ ಅಂಥ ವಿವಾಹ ತಡೆಗಟ್ಟಬೇಕು. ಶಿಶು ಮಕ್ಕಳ ರಕ್ಷಣೆಗಾಗಿ ಸಾರ್ವಜನಿಕ ಜನದಟ್ಟಣೆ ಇರುವ ಸ್ಥಳಗಳಲ್ಲಿ, ಜಿಲ್ಲಾ ಸಕರ್ಾರಿ ಆಸ್ಪತ್ರೆಗಳಲ್ಲಿ, ರೈಲ್ವೆ ನಿಲ್ದಾಣಗಳಲ್ಲಿ ಮತ್ತು ಬಸ್ ನಿಲ್ದಾಣಗಳಲ್ಲಿ ಮಮತೆಯ ತೊಟ್ಟಿಲುಗಳನ್ನು ಇರಿಸಿ ಸಾರ್ವಜನಿಕರಲ್ಲಿ ಈ ಕುರಿತು ಹೆಚ್ಚಿನ ಅರಿವು ಮತ್ತು ಜಾಗೃತಿಯನ್ನು ಮೂಡಿಸಬೇಕು ಎಂದು ನಿದರ್ೇಶಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts