More

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ರಾಜ್ಯಕ್ಕೆ ಮಾದರಿ

    ಪಾಂಡವಪುರ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ಚಟುವಟಿಕೆ ಇಡೀ ರಾಜ್ಯಕ್ಕೆ ಮಾದರಿಯಾಗಿವೆ ಎಂದು ಶಾಸಕ ಸಿ.ಎಸ್.ಪುಟ್ಟರಾಜು ಶ್ಲಾಘಿಸಿದರು.

    ತಾಲೂಕಿನ ಚಿನಕುರಳಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣಸ್ವಾಮಿ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಡಿ.ವೀರೇಂದ್ರ ಹೆಗ್ಗಡೆ ಅವರು ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕೆಂದು ಆಲೋಚಿಸಿ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬುವ ಯೋಜನೆ ರೂಪಿಸಿ ಅದನ್ನು ರಾಜ್ಯಾದ್ಯಂತ ಕಾರ್ಯಗತಗೊಳಿಸಿದರು. ಹೀಗಾಗಿ ಮಹಿಳೆಯರು ಯಾರ ಹಂಗಿಲ್ಲದೆ ಬದುಕು ಕಟ್ಟಿಕೊಳ್ಳಬಹುದು ಎಂದು ತೋರಿಸಿಕೊಟ್ಟಿದ್ದಾರೆ. ಇದರಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮಹತ್ತರ ಪಾತ್ರ ನಿರ್ವಹಿಸುತ್ತಿದೆ ಎಂದು ಪ್ರಶಂಸಿದರು.

    ವೀರೇಂದ್ರ ಹೆಗ್ಗಡೆ ಅವರು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಬಗ್ಗೆ ಅಪಾರ ಕಳಕಳಿ ಹೊಂದಿದ್ದಾರೆ. ಕಳೆದ ಯುಗಾದಿ ಹಬ್ಬದ ವೇಳೆ ಕ್ಷೇತ್ರಕ್ಕೆ ಆಗಮಿಸಿದ್ದ ಹೆಗ್ಗಡೆ ಅವರು ಇಲ್ಲಿನ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.

    ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾಗಿದ್ದಾಗ ತಾಲೂಕಿನ ಬೇಬಿ ಬೆಟ್ಟದಲ್ಲಿ ಆಯೋಜಿಸಿದ್ದ 155 ಜತೆ ಸರಳ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರ ಬಳಿ ಗ್ರಾಮಾಭಿವೃದ್ಧಿ ಸಂಸ್ಥೆಯ ಚಟುವಟಿಕೆಯನ್ನು ಮಂಡ್ಯ ಜಿಲ್ಲೆಗೂ ವಿಸ್ತರಿಸುವಂತೆ ಕೇಳಿಕೊಂಡಾಗ ಮುಗುಳು ನಗೆಯ ಮೂಲಕ ಉತ್ತರಿಸಿ ಜಿಲ್ಲೆಯಲ್ಲಿ ಯೋಜನೆ ಜಾರಿಗೊಳಿಸಿದರು ಎಂದರು.

    2023ರ ವಿಧಾನಸಭಾ ಚುನವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ. ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಸ್ತ್ರೀಶಕ್ತಿಗಳ ಸಾಲಮನ್ನಾ ಮಾಡುವ ಮೂಲಕ ಮಹಿಳೆಯರಿಗೆ ಆರ್ಥಿಕ ಸದೃಢತೆ ಕಲ್ಪಿಸುತ್ತಾರೆ. ಇದು ನೂರಕ್ಕೆ ನೂರರಷ್ಟು ಸತ್ಯ ಎಂದು ಹೇಳಿದರು.

    ತಾಲೂಕು ಯೋಜನಾಧಿಕಾರಿ ದಯಾನಂದ ಪೂಜಾರಿ ಮಾತನಾಡಿ, ಮಹಿಳೆಯರು ಮಾಸಿಕ 10 ರೂ.ನಂತೆ ಉಳಿತಾಯ ಮಾಡಿರುವ ಹಣ 8 ಕೋಟಿ ರೂ.ಗಳಾಗಿದೆ. ಜಿಲ್ಲೆಯಲ್ಲಿ ಮಹಿಳೆಯರಿಗೆ ಆರ್ಥಿಕ ಚೈತನ್ಯ ನೀಡಲು ಬ್ಯಾಂಕುಗಳ ಮೂಲಕ 93 ಕೋಟಿ ರೂ.ಪ್ರಗತಿ ನಿಧಿ ನೀಡಲಾಗಿದೆ. ತಾಲೂಕಿನಲ್ಲಿ 64 ಕುಟುಂಬಗಳಿಗೆ ಮಾಸಿಕ ಸಾವಿರ ರೂ.ಮಾಸಾಶನ ಹಾಗೂ 74 ಅಂಗವಿಕಲರಿಗೆ ಉಚಿತವಾಗಿ ಸಲಕರಣೆಗಳನ್ನು ವಿತರಿಸಲಾಗಿದೆ ಎಂದರು.

    ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಸದಸ್ಯರಾದ ಸಿ.ಅಶೋಕ್, ಶಾಂತಲಾ ರಾಮಕೃಷ್ಣ, ನಾಗಮ್ಮ ಪುಟ್ಟರಾಜು, ಗ್ರಾಪಂ ಅಧ್ಯಕ್ಷ ಕೆ.ಎಸ್.ಪುಟ್ಟಸ್ವಾಮಿ(ಪಾಪಣ್ಣ), ತಾಪಂ ಮಾಜಿ ಸದಸ್ಯ ಗೋಪಾಲೇಗೌಡ, ಗ್ರಾಪಂ ಸದಸ್ಯ ಸಿ.ಶಿವಕುಮಾರ್, ಪ್ರಕಾಶ್, ಮೊಗಣ್ಣಗೌಡ, ಪ್ರಭಾಕರ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts