More

    ಧರ್ಮ ಆಚರಣೆಯಿಂದ ಬೆಲೆ-ನೆಲೆ

    ಹುಬ್ಬಳ್ಳಿ: ಭೌತಿಕ ಬದುಕು ಸಮೃದ್ಧಗೊಂಡಂತೆ ಆಂತರಿಕ ಜೀವನ ಪರಿಶುದ್ಧಗೊಳ್ಳಬೇಕಾಗಿದೆ. ಸತ್ಯದ ತಳಹದಿ ಮೇಲೆ ಧರ್ಮ, ಸಂಸ್ಕೃತಿ ಗಟ್ಟಿಗೊಳ್ಳಬೇಕಾಗಿದೆ. ಸತ್ಯ ಶುದ್ಧವಾದ ಧರ್ವಚರಣೆಯಿಂದ ವ್ಯಕ್ತಿತ್ವಕ್ಕೆ ಬೆಲೆ ನೆಲೆ ಪ್ರಾಪ್ತವಾಗುವುದು ಎಂದು ಬಾಳೆಹೊನ್ನೂರು ಶ್ರೀರಂಭಾಪುರಿ ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.

    ಬಾಳೆಹೊನ್ನೂರಿನ ಶ್ರೀ ಮದ್ವೀರಶೈವ ಸದ್ಭೋದನ ಸಂಸ್ಥೆ ಹಾಗೂ ಬೆಂಗಳೂರಿನ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಸಹಯೋಗದಲ್ಲಿ ಇಲ್ಲಿನ ವಿದ್ಯಾನಗರದ ಶ್ರೀ ಜಗದ್ಗುರು ರಂಭಾಪುರಿ ವೀರಗಂಗಾಧರ ಸಮುದಾಯ ಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಶಿವಾಚಾರ್ಯ ಸಂಸ್ಕೃತಿ ಪುನಶ್ಚೇತನ ಚಿಂತನಾ ಸಮಾವೇಶದ ಎರಡನೇ ದಿನದ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

    ಸಮಾಜದಲ್ಲಿ ಸಂಘಟನೆಗಳು ನಡೆಯಬೇಕಲ್ಲದೇ ಸಂಘರ್ಷಗಳು ನಡೆಯಬಾರದು. ಖಾವಿ, ಖಾಕಿ ಮತ್ತು ಕಾವಿ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕಾರ್ಯ ಮಾಡಿದರೆ ಜನಕಲ್ಯಾಣದ ಜೊತೆಗೆ ಲೋಕ ಕಲ್ಯಾಣವಾಗುವುದು. ಆಡುವ ಮಾತು ಉಳಿಸಿಕೊಂಡು ಬಾಳುವುದೇ ನಿಜವಾದ ಧರ್ಮ ಎಂದರು.

    ಇದೇ ಸಂದರ್ಭದಲ್ಲಿ ‘ಸಾಧನೆಯ ಸತ್ಪಥ’ ಕೃತಿಯನ್ನು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಅಧ್ಯಕ್ಷ ಶ್ರೀ ವಿಮಲ ರೇಣುಕ ಮುಕ್ತಿಮುನಿ ಶಿವಾಚಾರ್ಯ ಸ್ವಾಮೀಜಿ ಬಿಡುಗಡೆ ಮಾಡಿದರು. ಹಲಗೂರು ಬೃಹನ್ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಕುಪ್ಪೂರು ಗದ್ದಿಗೆಮಠದ ಶ್ರೀ ಡಾ. ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.

    ಮೈಸೂರು ಜಪದಕಟ್ಟಿಮಠದ ಶ್ರೀ ಡಾ.ಮುಮ್ಮಡಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಎಮ್ಮಿಗನೂರು ಹಂಪಿಸಾವಿರದೇವರಮಠದ ಶ್ರೀ ವಾಮದೇವ ಮಹಂತ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಎಡೆಯೂರು ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ, ಶ್ರೀ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಶ್ರೀಮದ್ವೀರಶೈವ ಸದ್ಬೋಧನ ಸಂಸ್ಥೆ ಅಧ್ಯಕ್ಷ ಶ್ರೀ ಡಾ. ಕೊಟ್ಟೂರ ಬಸವೇಶ್ವರ ಶಿವಾಚಾರ್ಯ ಸ್ವಾಮೀಜಿಗಳನ್ನೊಳಗೊಂಡ 45 ವಿವಿಧ ಮಠಾಧೀಶರು ಚಿಂತನಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಪಾರ್ವತಿ ಮಹಿಳಾ ಅಭಿವೃದ್ಧಿ ಮಂಡಳ ಅಧ್ಯಕ್ಷೆ ಇಂಧುಮತಿ ಮಾನ್ವಿ ಸ್ವಾಗತಿಸಿದರು. ದೇವಾಪುರ ಹಿರೇಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts