More

    ಧಾರವಾಡ ಕುಸ್ತಿ ಹಬ್ಬ ಯಶಸ್ಸಿಗೆ ಶ್ರಮಿಸಿ

    ಧಾರವಾಡ: ಫೆ. 22ರಿಂದ 25ರವರೆಗೆ ರಾಜ್ಯ ಮಟ್ಟದ ಕುಸ್ತಿ ಹಬ್ಬ ನಗರದಲ್ಲಿ ನಡೆಯುತ್ತಿದ್ದು, ಕುಸ್ತಿ ಪ್ರೇಮಿಗಳು ಮಾತ್ರವಲ್ಲದೆ ಎಲ್ಲರೂ ಹಬ್ಬಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಶಾಸಕ ಅಮೃತ ದೇಸಾಯಿ ಹೇಳಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕುಸ್ತಿ ಹಬ್ಬ ಆಯೋಜನೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

    ಕರ್ನಾಟಕ ಕುಸ್ತಿ ಹಬ್ಬದ ಪ್ರಚಾರಕ್ಕಾಗಿ ಸಿದ್ಧಪಡಿಸುವ ಪ್ರೋಮೋದಲ್ಲಿ ರಾಜ್ಯದ ಲೋಗೋದೊಂದಿಗೆ ಧಾರವಾಡದ ಪ್ರಸಿದ್ಧ ಸ್ಥಳಗಳನ್ನು ಬಳಸಬೇಕು. ಅಂತಾರಾಷ್ಟ್ರೀಯ ಕುಸ್ತಿ ಪಟುಗಳಾದ ಸಾಕ್ಷಿ ಮಲ್ಲಿಕ್, ಕರ್ತಾರ್ ಸಿಂಗ್ ಸೇರಿ ಎರಡು ಸಾವಿರಕ್ಕೂ ಅಧಿಕ ಕುಸ್ತಿಪಟುಗಳು, ತರಬೇತುದಾರರು ಭಾಗವಹಿಸಲಿದ್ದಾರೆ. ಹಬ್ಬದ ಪ್ರಚಾರ ಸಾಮಗ್ರಿಗಳನ್ನು ಫೆ. 10ರೊಳಗೆ ತಯಾರಿಸಬೇಕು ಎಂದರು.

    ಜಿಲ್ಲಾಧಿಕಾರಿ ದೀಪಾ ಚೋಳನ್ ಮಾತನಾಡಿ, ಆಹಾರ ಮೇಳ, ವಾಹನ ಇತರೆ ವಸ್ತುಗಳ ಪ್ರದರ್ಶನ ಮಳಿಗೆ ಸ್ಥಾಪಿಸಲಾಗುತ್ತಿದ್ದು, ಸಂಬಂಧಿಸಿದ ಸಂಘ-ಸಂಸ್ಥೆಗಳ ಸಭೆ ಕರೆಯಲಾಗುವುದು. ವಿವಿಧ ಇಲಾಖೆ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದು, ಅಧ್ಯಕ್ಷರು ವಹಿಸಿದ ಜವಾಬ್ದಾರಿಗಳನ್ನು ತ್ವರಿತವಾಗಿ ನಿರ್ವಹಿಸಬೇಕು. ಈ ಕುರಿತು ಫೆ. 7ರಂದು ಪೂರ್ವಭಾವಿ ಸಭೆ ನಡೆಸಲಾಗುವುದು ಎಂದರು.

    ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಸದಾಶಿವ ಮರ್ಜಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಸಿ.ಡಿ.ನಾಯಕ, ತಹಸೀಲ್ದಾರರಾದ ಸಂತೋಷ ಕುಮಾರ ಬಿರಾದಾರ, ಶಶಿಧರ ಮಾಡ್ಯಾಳ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿನಾಯಕ ಪಾಲನಕರ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶಾಕೀರ್ ಅಹ್ಮದ್ ತೋಂಡಿಖಾನ್, ಅಜ್ಜಪ್ಪ ಸೊಗಲದ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts