More

    ಧಾರ್ಮಿಕ ಕೇಂದ್ರಗಳಿಂದ ನೆಮ್ಮದಿ

    ಚಿತ್ರದುರ್ಗ: ದೇವಾಲಯಗಳನ್ನು ನಿರ್ಮಿಸುವುದು ಎಷ್ಟು ಮುಖ್ಯವೋ ಅವುಗಳ ಪಾವಿತ್ರೃ ಕಾಪಾಡಿಕೊಳ್ಳುವುದು ಅಷ್ಟೇ ಅಗತ್ಯ ಎಂದು ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.
    ತಾಲೂಕಿನ ಹುಲ್ಲೂರು ಗ್ರಾಮದಲ್ಲಿ ಭಾನುವಾರ ಏರ್ಪಡಿಸಿದ್ದ ದುರ್ಗಾಂಬಿಕಾದೇವಿ ಉತ್ಸವ ಮೂರ್ತಿ ಹಾಗೂ ದೇವಸ್ಥಾನದ ಕಳಸ ಪ್ರತಿಷ್ಠಾಪನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ದೇವಾಲಯಗಳು ಜೀರ್ಣೋದ್ಧಾರವಾದಂತೆ ಮನುಷ್ಯನ ಜೀವನವೂ ಉತ್ತಮವಾಗಬೇಕು ಎಂದರು.
    ಧಾರ್ಮಿಕ ಕೇಂದ್ರಗಳಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ಸಿಗುತ್ತದೆ. ಮಠ, ಮಂದಿರ, ಚರ್ಚ್, ಮಸೀದಿ ಮೊದಲಾದ ಧಾರ್ಮಿಕ ಕೇಂದ್ರಗಳು ದೇಶಕ್ಕೆ ಅಗತ್ಯವಿದೆ. ಮಹಿಳೆಯರ ಸಬಲೀಕರಣದಿಂದ ಸಮಾಜ, ಒಂದು ಕುಟುಂಬ ಬದಲಾವಣೆ ಸಾಧ್ಯ. ಶಿಕ್ಷಣದಿಂದ ಬಡತನವನ್ನು ನಿವಾರಿಸಬಹುದು ಎಂದು ಹೇಳಿದರು.
    ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ಅಯೋಧ್ಯೆಯಲ್ಲಿ ರಾಮಮಂದಿರ, ಅಬುದಾಬಿಯಲ್ಲಿ ದೇವಾಲಯ ನಿರ್ಮಾಣವಾಗಿದೆ. ಸರ್ಕಾರದ ಅನುದಾನದಲ್ಲಿ ದೇವಸ್ಥಾನ ನಿರ್ಮಿಸುವುದಕ್ಕಿಂತ ಮಿಗಿಲಾಗಿ ಭಕ್ತರ ಸಹಾಯದಿಂದ ನಿರ್ಮಾಣ ವಾಗುವುದು ಸಂತಸದ ಸಂಗತಿ ಎಂದರು.
    ಮಕ್ಕಳಿಗೆ ತಪ್ಪದೆ ಶಿಕ್ಷಣ ಕೊಡಿಸಬೇಕು. ಅಂಬೇಡ್ಕರ್ ಅವರ ಸಂವಿಧಾನ ಎಲ್ಲರಿಗೂ ಸಮಾನವಾದ ಹಕ್ಕನ್ನು ಕೊಟ್ಟಿದೆ. ಅದರ ಪ್ರಯೋಜನ ಪಡೆದುಕೊಳ್ಳಬೇಕಿದೆ ಎಂದು ಹೇಳಿದರು.
    ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮಾತನಾಡಿ, ಅಧಿಕಾರದಲ್ಲಿದ್ದಾಗ ಸಮುದಾಯಕ್ಕೆ ಕಿಂಚಿತ್ತಾದರೂ ಸಹಾಯವಾಗುವಂತಹ ಕೆಲಸಗಳನ್ನು ಮಾಡಬೇಕು. ಸಮಾಜದ ಹೆಸರಿನಲ್ಲಿ ದೊರೆತ ಅಧಿಕಾರವನ್ನು ಸಮಾಜಕ್ಕೆ ಅರ್ಪಿಸಬೇಕು. ಸಂವಿಧಾನ ಎಲ್ಲ ಜಾತಿ, ಧರ್ಮದವರಿಗೂ ಸಮಾನತೆ ಕೊಟ್ಟಿದೆ ಎಂದರು.
    ಗ್ರಾಪಂ ಉಪಾಧ್ಯಕ್ಷ ಪಿ.ರಾಜಪ್ಪ, ಸದಸ್ಯರಾದ ರವಿಕುಮಾರ್, ದುಗ್ಗಪ್ಪ, ಮಾಜಿ ಸದಸ್ಯ ಹುಲ್ಲೂರು ಕೃಷ್ಣಪ್ಪ, ನಿವೃತ್ತ ಪೊಲೀಸ್ ಅಧಿಕಾರಿ ಸಮಾದಪ್ಪ, ಕಲ್ಲೇಶಪ್ಪ, ಹುಲ್ಲೂರು ಕುಮಾರ್ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts