More

    ಧೈರ್ಯದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎದುರಿಸಿ – ಡಾ.ಪ್ರಭಾಕರ ಕೋರೆ

    ಬೆಳಗಾವಿ: 2019-20ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಗುರುವಾರದಿಂದ ಆರಂಭವಾಗಲಿವೆ. ಮಾರಕ ಕೋವಿಡ್-19 ಮಹಾಮಾರಿಯಿಂದ ವಿದ್ಯಾರ್ಥಿಗಳು ತಲ್ಲಣಗೊಂಡಿರುವುದು ಸಹಜ. ಆದರೆ, ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಲವಾರು ಅಗತ್ಯ ಕ್ರಮ ಕೈಗೊಂಡಿದೆ.

    ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಹೆದರುವ, ಆತಂಕ ಪಡುವ ಅಗತ್ಯವಿಲ್ಲ. ಧೈರ್ಯದಿಂದ ಪರೀಕ್ಷೆ ಬರೆಯಿರಿ ಎಂದು ವಿದ್ಯಾರ್ಥಿಗಳಿಗೆ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಸಲಹೆ ನೀಡಿದ್ದಾರೆ.

    ವಿದ್ಯಾರ್ಥಿಗಳು ಮುಂದಿನ ಜೀವನದಲ್ಲಿ ಹಲವಾರು ಪರೀಕ್ಷೆ ಎದುರಿಸಬೇಕಾಗುತ್ತದೆ. ಎಸ್‌ಎಸ್‌ಎಲ್‌ಸಿ ಜೀವನದ ಮೊದಲ ಬೋರ್ಡ್ ಪರೀಕ್ಷೆ. ನಾನು ಫೇಲಾಗುತ್ತೇನೆಂಬ ಕೀಳರಿಮೆ ಬೇಡವೇ ಬೇಡ.ಅವುಗಳಿಗೆ ಎದೆಗುಂದದೆ ಬರುವ ಸವಾಲುಗಳನ್ನು ಧೈರ್ಯದಿಂದ ಎದುರಿಸುವಂತೆ ಮನಸ್ಸನ್ನು ಸದೃಢಗೊಳಿಸಿಕೊಳ್ಳಬೇಕಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ವೇಳೆ ಯಾವುದೇ ಒತ್ತಡ ಹೊಂದದೆ, ಭಯ ತಲ್ಲಣ ಬಿಟ್ಟು ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಬೇಕು.

    ನಿಮ್ಮ ಗೆಳೆಯರೊಂದಿಗೆ ದೈಹಿಕ ಅಂತರ ಕಾಪಾಡಿಕೊಳ್ಳಿ. ಕೈ ಕುಲಕಬೇಡಿ, ಅಪ್ಪಿಕೊಳ್ಳಬೇಡಿ. ಎಲ್ಲ ದುಗುಡಗಳನ್ನು ಬಿಡಿ. ಸಂತೋಷ ಹಾಗೂ ಆತ್ಮವಿಶ್ವಾಸದಿಂದ ಪ್ರಶ್ನೆ ಪತ್ರಿಕೆ ಬಿಡಿಸಿ. ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ‘ಬೆಸ್ಟ್ ಆಫ್ ಲಕ್’ ಎಂದ ಡಾ.ಪ್ರಭಾಕರ ಕೋರೆಯವರು ವಿದ್ಯಾರ್ಥಿಗಳಿಗೆ ಪ್ರಕಟಣೆ ಮೂಲಕ ಶುಭ ಕೋರಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts