More

    ಧೈರ್ಯವಿದ್ದರೆ ಧರ್ಮಸ್ಥಳದಲ್ಲಿ ಆಣೆ ಮಾಡಲಿ

    ಕುಶಾಲನಗರ: ಕಾಂಗ್ರೆಸ್ ಮತ್ತು ಬಿಜೆಪಿ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದು, ಅವರಿಗೆ ಧೈರ್ಯವಿದ್ದರೆ ಧರ್ಮಸ್ಥಳದಲ್ಲಿ ಆಣೆ ಮಾಡಲಿ ಎಂದು ಮಡಿಕೇರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ ಸವಾಲು ಹಾಕಿದರು.

    ಮಡಿಕೇರಿ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಪಕ್ಷ ಸಂಘಟನೆ ಮಾಡಲಾಗಿದೆ. ಕೊನೇ ಕ್ಷಣದಲ್ಲಿ ಕಸರತ್ತು ಮಾಡಲು ಸಾಧ್ಯವಾಗದ ಕಾರಣ ಕ್ಷೇತ್ರದ ಮತದಾರರಲ್ಲಿ ಕ್ಷಮೆ ಕೇಳುತ್ತೇನೆ. ಅಂತಿಮ ಹಂತದ ತಯಾರಿ ಮಾಡಿಕೊಳ್ಳಲು ಆಗಲಿಲ್ಲ. ಕ್ಷೇತ್ರದಲ್ಲಿ ಬೂತ್ ಮಟ್ಟದಲ್ಲಿ ತಯಾರಿಗಳು ಬೇರೆ ಪಕ್ಷಗಳಿಗಿಂತ ಚೆನ್ನಾಗಿ ಆಗಿದೆ. ಆರ್ಥಿಕ ಸಂಪನ್ಮೂಲ ಕೊರತೆಯಿಂದಾಗಿ ಜನರನ್ನು ತಲುಪಲು ಆಗಲಿಲ್ಲ. ನಮ್ಮ ಪಕ್ಷದ ವರಿಷ್ಠರಿಗೂ ಈ ಮಾಹಿತಿ ಇದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

    ಹಣದ ಮೂಲಗಳು ಸಮಯಕ್ಕೆ ಸರಿಯಾಗಿ ಸಿಗದ ಕಾರಣ ಚುನಾವಣೆ ಸಂದರ್ಭದಲ್ಲಿ ತಟಸ್ಥವಾಗಿ ಇರಬೇಕಾಯಿತು. ದುಡ್ಡು ಇಲ್ಲದೆ ಚುನಾವಣೆ ನಡೆಸುವುದು ಕಷ್ಟ. ನಮ್ಮ ಪಕ್ಷದ ಕೆಲವರು ರಾಷ್ಟ್ರೀಯ ಪಕ್ಷಗಳ ಕಡೆ ವಾಲಿದರು. ಪಕ್ಷದ ನಿಷ್ಠಾವಂತರು ಮಾತ್ರ ಯಾವುದೇ ಫಲಾಪೇಕ್ಷೆಯಿಲ್ಲದೆ ದುಡಿದಿದ್ದು, ಎರಡೂ ಪಕ್ಷದ ಅಭ್ಯರ್ಥಿಗಳು ನನ್ನ ವಿರುದ್ಧ ಸುಳ್ಳಿನ ಆರೋಪ ಹೊರಿಸಿದ್ದಾರೆ ಎಂದು ಕಿಡಿಕಾರಿದರು.

    300ಕ್ಕೂ ಅಧಿಕ ದೇವಸ್ಥಾನ, ಚರ್ಚ್ ಮತ್ತು ಮಸೀದಿಗಳಿಗೆ ನಾನು ಕೊಟ್ಟಿರುವ ದಾನಕ್ಕೆ ಬೆಲೆಯಿಲ್ಲವೇ ಎಂದು ಪ್ರಶ್ನಿಸಿದ ಅವರು, ದೆಹಲಿ ಮತ್ತು ಪಂಜಾಬ್ನಲ್ಲಿ ಎಎಪಿ ಮಾಡುತ್ತಿರುವ ಅಭಿವೃದ್ಧಿಯನ್ನು ನೋಡಿ ಅದೇ ಮಾದರಿಯಲ್ಲಿ ಮುಂದಿನ ದಿನಗಳಲ್ಲಿ ಆಮ್ ಆದ್ಮಿ ಪಾರ್ಟಿ ಜತೆ ಸೇರಿ ಜಿಲ್ಲೆಯನ್ನು ಅಭಿವೃದ್ಧಿಪಡಿಸಬೇಕಿದೆ ಎಂದರು.
    ಅಜ್ಜಹಳ್ಳಿ ರವಿ ಇತರರು ಸುದ್ದಿಗೋಷ್ಠಿಯಲ್ಲಿದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts