More

    ಮೊಟ್ಟೆ ಎಸೆದವರ ವಿರುದ್ಧ ಕ್ರಮ ಜರುಗಿಸಿ : ನಂಜನಗೂಡಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ

    ಮೈಸೂರು : ಕೊಡಗಿನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರು ನಂಜನಗೂಡಿನಲ್ಬೃಲಿ ಹತ್ ಪ್ರತಿಭಟನೆ ನಡೆಸಿದರು.
    ನಗರದ ವಿಶ್ವೇಶ್ವರಯ್ಯ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಕಾರ್ಯಕರ್ತರು, ಆರ್‌ಎಸ್‌ಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗುತ್ತಾ, ಸಿಎಂ ಬಸವರಾಜ ಬೊಮ್ಮಾಯಿ ಭಾವಚಿತ್ರಕ್ಕೆ ಮೊಟ್ಟೆ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು. ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಘೋಷಣೆ ಕೂಗಿದರು.
    ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಮಾತನಾಡಿ, ಕೊಡಗು ಜಿಲ್ಲೆ ದೇಶಕ್ಕೆ ಅನೇಕ ಸೈನಿಕರನ್ನು ಕೊಟ್ಟಂತಹ ಪುಣ್ಯಭೂಮಿ. ಸಾಂವಿಧಾನಿಕ ಹುದ್ದೆಯಲ್ಲಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಕಾರಿಗೆ ಇಂತಹ ವೀರಭೂಮಿಯಲ್ಲಿ ಐದು ಕಡೆ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮೊಟ್ಟೆ ಎಸೆದು ವಿಕೃತಿ ತೋರಿದ್ದಾರೆ. ಈ ಕೃತ್ಯ ಎಸಗಿದವರು ನಮ್ಮ ಪಕ್ಷದವರೇ ಅಲ್ಲ ಎಂದು ಬಿಜೆಪಿ ಹೇಳಿದೆ. ಏತನ್ಮಧ್ಯೆ, ಆರೋಪಿಗಳನ್ನು ಪೊಲೀಸರು ರಾತ್ರೋರಾತ್ರಿ ಬಿಡುಗಡೆ ಮಾಡಿದ್ದಾರೆ. ನಮ್ಮವರೇ ಅಲ್ಲ ಎಂದ ಮೇಲೆ ಸರ್ಕಾರ ಅವರ ರಕ್ಷಣೆಗೆ ಮುಂದಾಗಿದೆ ಎಂದು ಆಪಾದಿಸಿದರು.
    ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಅವರ ಮೇಲೆ ಅಟ್ಯಾಕ್ ಮಾಡಿದ್ದು ಗುಪ್ತಚರ ಇಲಾಖೆ ಏನು ಮಾಡುತ್ತಿದೆ ಎಂಬುದು ತಿಳಿಯುತ್ತಿಲ್ಲ. ಪೊಲೀಸ್ ಇಲಾಖೆ ಸಂಪೂರ್ಣ ವೈಫಲ್ಯವಾಗಿದೆ. ಸರ್ಕಾರದ ಕುಮ್ಮಕ್ಕಿನಿಂದಲೇ ಈ ಕೃತ್ಯ ನಡೆದಿದೆ. ಒಳ್ಳೆಯ ಆಡಳಿತ ಕೊಡುವಲ್ಲಿ ವಿಫಲವಾಗಿರುವ ಬಿಜೆಪಿ ಸರ್ಕಾರ ತಮ್ಮ ವೈಫಲ್ಯವನ್ನು ಮರೆಮಾಚಲು ಇಂತಹ ಕುಕೃತ್ಯ ಎಸಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
    ಸರ್ವ ಜನಾಂಗದ ಶಾಂತಿಯ ತೋಟವಾಗಿರುವ ರಾಜ್ಯದಲ್ಲಿ ಧರ್ಮಗಳ ನಡುವೆ ಕಂದಕ ಸೃಷ್ಟಿಸುವುದು ಬಿಜೆಪಿಗೆ ಚಾಳಿಯಾಗಿದೆ. ಐದು ವರ್ಷ ಮುಖ್ಯಮಂತ್ರಿಯಾಗಿ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಎಲ್ಲ ಭರವಸೆಗಳನ್ನು ಸಾಕಾರಗೊಳಿಸಿದ ಏಕೈಕ ಮುಖ್ಯಮಂತ್ರಿ ಎಂಬ ಬಿರುದಿಗೆ ಸಿದ್ದರಾಮಯ್ಯ ಭಾಜನರಾಗಿದ್ದಾರೆ. ಇಂತಹ ವ್ಯಕ್ತಿಗೆ ಅಪಚಾರ ಎಸಗುವುದು ಬಿಜೆಪಿಗೆ ಶೋಭೆ ತರುವುದಿಲ್ಲ. ಮುಂದೆ ಬಿಜೆಪಿಯವರು ಇದೇ ವಿಕೃತಿ ತೋರಿದರೆ ನಾವು ತಕ್ಕ ಪಾಠ ಕಲಿಸಬೇಕಾಗುತ್ತದೆ. ಸಿದ್ದರಾಮಯ್ಯ ಅವರಿಗೆ ಅಗೌರವ ತೋರಿದವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
    ಮಾಜಿ ಶಾಸಕ ಕಳಲೆ ಎನ್.ಕೇಶವಮೂರ್ತಿ, ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎಂ.ಲತಾಸಿದ್ದಶೆಟ್ಟಿ, ಬಿಸಿಎಂ ಅಧ್ಯಕ್ಷ ಕೆ.ಮಾರುತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕುರಹಟ್ಟಿ ಮಹೇಶ್, ಸಿ.ಎಂ.ಶಂಕರ್, ತಾ.ಪಂ. ಮಾಜಿ ಅಧ್ಯಕ್ಷ ಬಿ.ಎಂ.ನಾಗೇಶ್‌ರಾಜ್, ಹುಂಡಿ ನಾಗರಾಜು, ಕೂಡ್ಲಾಪುರ ವಾಸು, ಉಪ್ಪನಹಳ್ಳಿ ಶಿವಣ್ಣ, ಕಳಲೆ ರಾಜೇಶ್, ಚಿನ್ನದಗುಡಿಹುಂಡಿ ನಾಗರಾಜು ಸೇರಿದಂತೆ ಹಲವರು ಭಾಗಿಯಾಗಿದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts