More

    ನಕಲು ಮಾಡಿದವರು ಪಾಸ್ ಆಗಲ್ಲ ; ಸಚಿವ ಯೋಗೇಶ್ವರ್‌ಗೆ ಟಾಂಗ್ ಕೊಟ್ಟ ರೇಣುಕಾಚಾರ್ಯ ; ಸಿದ್ಧಗಂಗಾಮಠಕ್ಕೆ ಭೇಟಿ

    ತುಮಕೂರು : ಪರೀಕ್ಷೆ ಬರೆದವರಿಗೆ ಅವರ ಹಣೆಬರಹ ಗೊತ್ತಿರುತ್ತದೆೆ. ವ್ಯಾಲ್ಯುಯೇಷನ್ ಮಾಡಿ ಮಾರ್ಕ್ಸ್ ಕಾರ್ಡ್ ಪ್ರಿಂಟ್ ಹಾಕುವುದೇ ಬೇಡ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಪರೋಕ್ಷವಾಗಿ ಸಚಿವ ಯೋಗೇಶ್ವರ್‌ಗೆ ಟಾಂಗ್ ಕೊಟ್ಟರು.

    ಸಿದ್ಧಗಂಗಾಮಠಕ್ಕೆ ಶನಿವಾರ ಭೇಟಿ ನೀಡಿ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಜವಾಗಿ ಪರೀಕ್ಷೆ ಬರೆದವರು ಫೇಲ್ ಆಗಿದ್ದೇವೆ. ಇನ್ನು ಕಾಪಿ ಹೊಡೆದು ಪರೀಕ್ಷೆ ಬರೆದವರು ಎಂದಿಗೂ ಪಾಸ್ ಆಗುವುದಿಲ್ಲ. ಇದಕ್ಕೆ ಉತ್ತರ ಅವರಿಗೇ ಸಿಗುತ್ತದೆ. ನಕಲಿ ಪರೀಕ್ಷೆ ಬರೆದವರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದರು.

    ಬಿಎಸ್‌ವೈ ನೇತೃತ್ವದಲ್ಲೇ ಚುನಾವಣೆ: ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯವೋ ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಮುಂದುವರೆಯುವುದು ಅಷ್ಟೇ ಸತ್ಯ. ಮುಂದಿನ ಚುನಾವಣೆಯನ್ನೂ ಯಡಿಯೂರಪ್ಪ ನೇತೃತ್ವದಲ್ಲೇ ಪಕ್ಷ ಎದುರಿಸಲಿದೆ ಎಂದು ರೇಣುಕಾಚಾರ್ಯ ಹೇಳಿದರು.

    ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ಸಿಂಗ್ ಅವರು ಬೆಂಗಳೂರು ಭೇಟಿ ಬಳಿಕ ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಯಡಿಯೂರಪ್ಪ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಅದು ಅವರ ವೈಯಕ್ತಿಕ ತೀರ್ಮಾನವಾಗಿರಲ್ಲ. ಪ್ರಧಾನ ಮಂತ್ರಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ, ಬಿ.ಎಲ್.ಸಂತೋಷ್ ಜತೆಗೆ ಚರ್ಚೆ ಮಾಡಿಯೇ ಈ ಹೇಳಿಕೆ ನೀಡಿರುತ್ತಾರೆ. ಇದರಿಂದ ನಾಯಕತ್ವ ಬದಲಾವಣೆ ಚರ್ಚೆಗೆ ಪೂರ್ಣ ವಿರಾಮ ಹಾಕಲಾಗಿದೆ ಎಂದು ರೇಣುಕಾಚಾರ್ಯ ತಿವಿದರು. ಜಾರಕಿಹೊಳಿ ಪಕ್ಷ ಬಿಡಲ್ಲ: ರಮೇಶ್ ಜಾರಕಿಹೊಳಿ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಸಿಎಂ ಹಾಗೂ ಪಕ್ಷದ ರಾಜ್ಯ ಅಧ್ಯಕ್ಷರು ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಜಾರಕಿಹೊಳಿ ಯಾವುದೇ ಕಾರಣಕ್ಕೂ ಪಕ್ಷ ತೊರೆಯುವುದಿಲ್ಲ, ಬಿಜೆಪಿಯಲ್ಲೇ ಅಂತಿಮ ಎನ್ನುವ ಮಾತನ್ನೂ ಹೇಳಿದ್ದಾರೆ. ಹಾಗಾಗಿ ಪಕ್ಷ ಬಿಡುವ ಪ್ರಶ್ನೆ ಇಲ್ಲ ಎಂದು ಹೇಳಿದರು.

    800 ಕೋಟಿ ಅನುದಾನ: ಹೊನ್ನಾಳಿ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು 800 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು ಅವರಿಗೆ ಅಭಿನಂದನೆ ಸಲ್ಲಿಸಿದ್ದೇನೆ. ಕುಡಿಯುವ ನೀರು, ಕ್ಷೇತ್ರದ ಕೆರೆಗಳ ಅಭಿವೃದ್ಧಿ ಮತ್ತು ಇತರ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಳಸಿಕೊಳ್ಳಲಾಗುವುದು ಎಂದು ರೇಣುಕಾಚಾರ್ಯ ತಿಳಿಸಿದರು.

    ಬಿಜೆಪಿ ವಕ್ತಾರ ಕೊಪ್ಪಲ್ ನಾಗರಾಜ್, ಮುಖಂಡರಾದ ಮಹೇಶ್, ಮಲ್ಲಸಂದ್ರ ಶಿವಣ್ಣ, ಸತೀಶ್, ಪ್ರಕಾಶ್, ಚೇತನ್ ಮತ್ತಿತರರು ಉಪಸ್ಥಿತರಿದ್ದರು.

    ಕಾಂಗ್ರೆಸ್‌ನಲ್ಲಿ ಈಗಲೇ ಕಚ್ಚಾಟ : ವಿಧಾನಸಭೆ ಚುನಾವಣೆ ಇನ್ನೂ ಎರಡು ವರ್ಷ ಬಾಕಿ ಇರುವಂತೆಯೇ ಜನಾದೇಶವಿಲ್ಲದ ಕಾಂಗ್ರೆಸ್‌ನಲ್ಲಿ ಈಗಾಗಲೇ ನಾಯಕತ್ವಕ್ಕಾಗಿ ಕಚ್ಚಾಟ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಆ ಪಕ್ಷವನ್ನು ಜನರೇ ತಿರಸ್ಕರಿಸಲಿದ್ದಾರೆ. ಕಳೆದ ಚುನಾವಣೆಯಲ್ಲಿ 70 ಸ್ಥಾನಕ್ಕೆ ಕುಸಿದಿದ್ದ ಕಾಂಗ್ರೆಸ್ 2023ರಲ್ಲಿ 25 ರಿಂದ 30 ಸ್ಥಾನಗಳನ್ನು ಮಾತ್ರ ಗೆಲ್ಲಬಹುದು ಎಂದು ರೇಣುಕಾಚಾರ್ಯ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts