

ಚಿತ್ರದುರ್ಗ: ಮಾಳಪ್ಪನಹಟ್ಟಿಯ ತಿರುಮಲ ಕಲ್ಯಾಣ ಮಂಟಪದಲ್ಲಿ ಸೆ. 23ರ ಮಧ್ಯಾಹ್ನ 3.30ಕ್ಕೆ ಬಿಜೆಪಿ ಸದಸ್ಯತ್ವ ಅಭಿಯಾನದ ಜಿಲ್ಲಾ ಪರಿಶೀಲನಾ ಸಭೆ ನಡೆಯಲಿದೆ.
ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಉಸ್ತುವಾರಿ ರಾಧಾ ಮೋಹನ್ ಅಗರ್ವಾಲ್ ಅವರು ಭಾಗವಹಿಸಲಿದ್ದಾರೆ.
ಬಿಜೆಪಿ ಜಿಲ್ಲಾ, ಮಂಡಲ, ಮೋರ್ಚಾದ ಪದಾಧಿಕಾರಿಗಳು, ಸದಸ್ಯತ್ವ ಅಭಿಯಾನದ ಸಂಚಾಲಕರು, ಸಹ ಸಂಚಾಲಕರು, ಚುನಾಯಿತ ಪ್ರತಿನಿಧಿಗಳು, ಸ್ಥಳೀಯ ಸಂಸ್ಥೆಗಳ ಸದಸ್ಯರು ತಪ್ಪದೆ ಪಾಲ್ಗೊಳ್ಳಿ ಎಂದು ಜಿಲ್ಲಾಧ್ಯಕ್ಷ ಎ.ಮುರಳಿ ಮನವಿ ಮಾಡಿದ್ದಾರೆ.