More

    ನಗರದಲ್ಲಿ ಮಸ್ಟರಿಂಗ್ ಕಾರ್ಯ

    ಮಡಿಕೇರಿ: ವಿಧಾನಸಭಾ ಚುನಾವಣೆ ಸಂಬಂಧ ಮಸ್ಟರಿಂಗ್ ಕಾರ್ಯ ನಗರದ ಸಂತ ಜೋಸೆಫರ ಶಾಲೆ ಮತ್ತು ವಿರಾಜಪೇಟೆಯ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಮಂಗಳವಾರ ನಡೆಯಿತು.
    ಜಿಲ್ಲೆಯ 543 ಮತಗಟ್ಟೆಗಳಿಗೆ ನಿಯೋಜಿಸಿರುವ ಎಲ್ಲ ಹಂತದ ಪೋಲಿಂಗ್ ಅಧಿಕಾರಿಗಳು ಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿ ತಮಗೆ ಹಂಚಿಕೆಯಾದ ಮತಗಟ್ಟೆಯ ಸಂಖ್ಯೆಯನ್ನು ತಿಳಿದುಕೊಂಡು ನಿಗದಿಪಡಿಸಿದ ಕೌಂಟರ್‌ಗೆ ತೆರಳಿ ತಮ್ಮ ಮತಗಟ್ಟೆಗೆ ನಿಯೋಜಿಸಿರುವ ಮತಗಟ್ಟೆ ಅಧಿಕಾರಿಗಳನ್ನು ಪರಿಚಯ ಮಾಡಿಕೊಂಡರು. ಬಳಿಕ ಸೆಕ್ಟರ್ ಅಧಿಕಾರಿಗಳಿಂದ ಚುನಾವಣೆ ಸಂಬಂಧ ಮಾಹಿತಿ ಪಡೆದ ಇತರ ಅಧಿಕಾರಿಗಳು ಮತಗಟ್ಟೆ ಕಾರ್ಯನಿರ್ವಹಣೆಗೆ ಬೇಕಾಗಿರುವ ಸಾಮಗ್ರಿಗಳನ್ನು ಪಡೆದು ಮತಗಟ್ಟೆಗಳತ್ತ ಮುಖಮಾಡಿದರು.
    ಮಡಿಕೇರಿ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಚುನಾವಣಾಧಿಕಾರಿ ಡಾ.ಯತೀಶ್ ಉಳ್ಳಾಲ್, ತಹಸೀಲ್ದಾರರಾದ ಕಿರಣ್ ಗೌರಯ್ಯ, ಎಸ್.ಎನ್.ನರಗುಂದ, ಚುನಾವಣಾ ತಹಸೀಲ್ದಾರ್ ರವಿಶಂಕರ್ ಹಾಗೂ ಸೆಕ್ಟರ್ ಅಧಿಕಾರಿಗಳು ಮಸ್ಟರಿಂಗ್ ಕಾರ್ಯನಿರ್ವಹಣೆ ಸಂಬಂಧ ಮೇಲ್ವಿಚಾರಣೆ ನಡೆಸಿ ಮತಗಟ್ಟೆ ಅಧಿಕಾರಿಗಳಿಗೆ ಮತಗಟ್ಟೆಯಲ್ಲಿ ಕಾರ್ಯನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.
    ಬಳಿಕ ಮತಗಟ್ಟೆ ಅಧಿಕಾರಿಗಳು ತಮ್ಮ ಮತಗಟ್ಟೆಗಳಿಗೆ ತೆರಳಿದರು. ಮತಗಟ್ಟೆ ಅಧ್ಯಕ್ಷಾಧಿಕಾರಿ(ಪಿಆರ್‌ಒ), ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿ (ಎಪಿಆರ್‌ಒ), 2 ನೇ ಮತಗಟ್ಟೆ ಅಧಿಕಾರಿ, 3 ನೇ ಮತಗಟ್ಟೆ ಅಧಿಕಾರಿ ಮತಗಟ್ಟೆ ಕಾರ್ಯನಿರ್ವಹಣೆ ಬಗ್ಗೆ ಮಾಹಿತಿ ಪಡೆದರು.
    ಮತಗಟ್ಟೆ ಅಧಿಕಾರಿಗಳು ಪರಸ್ಪರ ಚರ್ಚಿಸಿದರು. ಸುಸೂತ್ರವಾಗಿ ಚುನಾವಣೆ ನಡೆಸುವಂತೆ ಮತಗಟ್ಟೆ ಅಧಿಕಾರಿಗಳಿಗೆ ಚುನಾವಣಾಧಿಕಾರಿ ನಿರ್ದೇಶನ ನೀಡಿದರು. ಸೆಕ್ಟರ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳಿಗೆ ಚುನಾವಣೆ ಸಂಬಂಧ ಹಲವು ಮಾಹಿತಿ ಮಾರ್ಗದರ್ಶನ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts