More

    ನಗರಸಭೆ ಕಚೇರಿಗೆ ಕಾಂಗ್ರೆಸ್‌ನಿಂದ ಮುತ್ತಿಗೆ : ಅಭಿವೃದ್ಧಿ ಕಾರ್ಯಗಳ ನಿರ್ಲಕ್ಷೃ, ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬ ಆರೋಪ

    ಕೊಡಗು : ಮಡಿಕೇರಿ ನಗರಸಭೆ ಆಡಳಿತ ಅಭಿವೃದ್ಧಿ ಕಾರ್ಯಗಳನ್ನು ನಿರ್ಲಕ್ಷಿಸಿದೆ ಮತ್ತು ಸಾರ್ವಜನಿಕರ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬ ಧೋರಣೆ ತೋರುತ್ತಿದೆ ಎಂದು ಆರೋಪಿಸಿ ನಗರಸಭೆ ಕಚೇರಿಗೆ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಮುಖಂಡರು ಸೋಮವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.


    ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಮೂಲಕ ನಗರಸಭೆಗೆ ತೆರಳಿದ ಮುಖಂಡರು ನಗರಸಭಾ ಕಚೇರಿ ಎದುರು ಜಮಾಯಿಸಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.


    ಕಾಂಗ್ರೆಸ್ ನಗರಾಧ್ಯಕ್ಷ ಬಿ.ವೈ.ರಾಜೇಶ್ ಮಾತನಾಡಿ, ನಗರದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತ ನೀರಾಗಿವೆ. ಅರ್ಜಿಗಳು ಸಕಾ ಲದಲ್ಲಿ ವಿಲೇವಾರಿಯಾಗದೆ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಖಾತೆ ವರ್ಗಾವಣೆ, ಫಾರಂ ನಂ 3 ಸೇರಿದಂತೆ ವಿವಿಧ ಅರ್ಜಿ ಗಳನ್ನು ವಿಲೇವಾರಿ ಮಾಡದೆ ಸತಾಯಿಸಲಾಗುತ್ತಿದೆ. ನಗರಕ್ಕೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ. ಸ್ವಚ್ಛತೆಗೆ ಆದ್ಯತೆ ನೀಡುತ್ತಿಲ್ಲ. ನಗರದಲ್ಲಿರುವ ಸುಲಭ ಶೌಚಗೃಹಗಳು ನಿರ್ವಹಣೆ ಇಲ್ಲದೆ ದುರ್ನಾತ ಬೀರುತ್ತಿವೆ. ನಗರದ ಹೃದಯ ಭಾಗವಾದ ಜನರಲ್ ತಿಮ್ಮಯ್ಯ ವೃತ್ತ ವ್ಯಾಪ್ತಿಯಲ್ಲಿ ನೂರಾರು ಪ್ರಯಾಣಿಕರು ಬಸ್‌ಗಳಿಗಾಗಿ ಕಾದು ನಿಲ್ಲುತ್ತಾರೆ. ಆದರೆ ಸುಸಜ್ಜಿತ ಬಸ್ ತಂಗುದಾಣ, ಶೌಚಗೃಹ ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡುವಲ್ಲಿ ನಗರಸಭೆ ವಿಫಲವಾಗಿದೆ ಎಂದು ಆರೋಪಿಸಿದರು.


    ತರಕಾರಿ ಮತ್ತು ಮಾಂಸದ ಮಾರುಕಟ್ಟೆ ಮೂಲ ಸೌಲಭ್ಯಗಳಿಲ್ಲದೆ ಅಶುಚಿತ್ವದಿಂದ ಕೂಡಿದೆ. ಮಾಂಸ ಮಾರುವ ಪ್ರದೇಶವನ್ನು ವೈಜ್ಞಾನಿಕವಾಗಿ ಸುಸಜ್ಜಿತಗೊಳಿಸದೆ ನಿರ್ಲಕ್ಷಿಸಲಾಗಿದೆ. ನೂತನ ಖಾಸಗಿ ಬಸ್ ನಿಲ್ದಾಣಕ್ಕೆ ಮೂಲಸೌಲಭ್ಯಗಳನ್ನು ಒದಗಿಸದೆ ನಿರ್ಲಕ್ಷಿಸ ಲಾಗಿದೆ. ಚರಂಡಿ ಮತ್ತು ತೋಡು ತುಂಬಾ ಹೂಳು ತುಂಬಿದ್ದು, ಸಣ್ಣ ಮಳೆಗೂ ಪ್ರವಾಹದಂತೆ ನೀರು ಹರಿದು ಮನೆಗಳಿಗೆ ನುಗ್ಗುತ್ತಿದೆ. ಆದರೂ ನಗರಸಭೆ ಸ್ವಚ್ಛತಾ ಕಾರ್ಯ ಕೈಗೊಂಡಿಲ್ಲ. ನಗರದಲ್ಲಿ ಸಂಗ್ರಹವಾದ ಕಸವನ್ನು ಅವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುತ್ತಿದ್ದು, ಇಲ್ಲಿವರೆಗೆ ಜಾಗ ಗುರುತಿಸಿ ವೈಜ್ಞಾನಿಕ ರೂಪ ನೀಡುವ ಕಾರ್ಯ ಮಾಡಿಲ್ಲ ಎಂದು ದೂರಿದರು.


    ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್, ರಾಜೀವ್‌ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರ ಮೈನಾ, ಕಾಂಗ್ರೆಸ್ ಮಡಿಕೇರಿ ನಗರ ಘಟಕದ ಅಧ್ಯಕ್ಷೆ ಹೊಟ್ಟೆಂಗಡ ಪಾರ್ವತಿ ಇದ್ದರು.



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts