More

    ನದಾಫ್-ಪಿಂಜಾರ ಸಮುದಾಯಕ್ಕೂ ಅಭಿವೃದ್ಧಿ ನಿಗಮ ಸ್ಥಾಪಿಸಿ: ಸರ್ಕಾರಕ್ಕೆ ಮನವಿ

    ವಿಜಯಪುರ: ರಾಜಕೀಯ, ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ನದಾಫ್-ಪಿಂಜಾರ ಸಮುದಾಯದ ಅಭಿವೃದ್ಧಿಗೆ ನಿಗಮ ಮಂಡಳಿ ಸ್ಥಾಪಿಸಲು ಆಗ್ರಹಿಸಿ ಆ ಸಮುದಾಯದ ಮುಖಂಡರು ಕರ್ನಾಟಕ ರಾಜ್ಯ ನದಾಫ್-ಪಿಂಜಾರ್ ಸಂಘದ ನೇತೃತ್ವ ಮಂಗಳವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

    ನದಾಫ್ ಮತ್ತು ಪಿಂಜಾರ ಸಮುದಾಯ ಗ್ರಾಮೀಣ ಭಾಗದಲ್ಲಿ ನೆಲೆಸಿದ್ದು ಸಣ್ಣ ಪುಟ್ಟ ಉದ್ಯೋಗ ಮಾಡಿಕೊಂಡು ಹೊಟ್ಟೆ ಹೊರೆಯುತ್ತಿದೆ. ತಂತ್ರಜ್ಞಾನ ಬೆಳವಣಿಗೆಯಿಂದಾಗಿ ಸಮುದಾಯದ ಮೂಲಕ ಕಸುಬು ಅಧೋಗತಿಗಿಳಿದಿದೆ. ಅನೇಕರು ನಿರುದ್ಯೋಗಿಗಳಾಗಿದ್ದಾರೆ. ರಾಜ್ಯದಲ್ಲಿ ಸುಮಾರು 30 ಲಕ್ಷ ಜನಸಂಖ್ಯೆ ಇದ್ದು ಇದರಲ್ಲಿ ಶೇ. 90ಕ್ಕಿಂತಲೂ ಅಧಿಕ ಜನ ಬಡವರಿದ್ದು ಮಕ್ಕಳಿಗೆ ಶಿಕ್ಷಣ ಕೊಡಿಸಲಾಗದ ಸ್ಥಿತಿಯಲ್ಲಿದ್ದಾರೆ. ಹೀಗಾಗಿ ಸಮುದಾಯಕ್ಕೆ ನಿಗಮ ಮಂಡಳಿ ಸ್ಥಾಪಿಸಲು ಈಗಾಗಲೇ ಎರಡು ಬಾರಿ ಮುಖ್ಯಮಂತ್ರಿಗಳಿಗೆ ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಇನ್ನಾದರೂ ಬೇಡಿಕೆಗೆ ಮನ್ನಣೆ ನೀಡಬೇಕೆಂದು ಅವರು ಮನವಿ ಮಾಡಿದರು.
    ಸಂಘದ ಅಧ್ಯಕ್ಷ ಮುಬಾರಕ ಕೆ.ನದಾಫ್, ಎ.ಎಂ. ಅಂಗಡಿ, ಬಂದೇನಮಾಜ್ ಎಂ.ಕೋರಬು, ಎಂ.ಡಿ. ಬಡೇಗರ, ಮೈನುದ್ದೀನ ನದಾಫ್, ಕೆ.ಡಿ. ನದಾಫ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts