More

    ನದಿಯಲ್ಲಿ ಕೊಚ್ಚಿ ಹೋದ ರೈತ

    ನರಗುಂದ: ಮಲಪ್ರಭಾ ನದಿ ಸೇತುವೆ ದಾಟುವಾಗ ಕಾಲು ಜಾರಿ ಬಿದ್ದು ವ್ಯಕ್ತಿಯೊಬ್ಬ ನದಿಯಲ್ಲಿ ಕೊಚ್ಚಿ ಹೋದ ಘಟನೆ ತಾಲೂಕಿನ ಕೊಣ್ಣೂರ ಗ್ರಾಮದ ಬಳಿ ಭಾನುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಡೆದಿದೆ.

    ಕೊಣ್ಣೂರಿನ ವೆಂಕನಗೌಡ (ಬಾಪೂಗೌಡ) ರಾಮನಗೌಡ ಸಾಲಿಗೌಡ್ರ (40) ಕೊಚ್ಚಿ ಹೋಗಿರುವ ವ್ಯಕ್ತಿ. ಈತ ಟೆಂಗಿನಕಾಯಿ ತುಂಬಿರುವ ಚೀಲ ತರಲು ಮಲಪ್ರಭಾ ನದಿ ಪಕ್ಕದಲ್ಲಿರುವ ತನ್ನ ಜಮೀನಿಗೆ ತೆರಳಿದ್ದ. ಜಮೀನಿಗೆ ಹೋಗುವಾಗ ಮಲಪ್ರಭಾ ಹಳೆಯ ಸೇತುವೆ ಮೇಲೆ ಅಷ್ಟೊಂದು ಪ್ರಮಾಣದ ನೀರು ಹರಿಯುತ್ತಿರಲಿಲ್ಲ. ಆದರೆ, ವಾಪಸ್ ಬರುವಾಗ ಶನಿವಾರ ರಾತ್ರಿಯಿಡಿ ಸುರಿದ ಮಳೆ ಹಾಗೂ ಜಲಾಶಯದಿಂದ ಹರಿಬಿಟ್ಟ ನೀರಿನಿಂದ ಸೇತುವೆ ತುಂಬಿ ಹರಿಯುತ್ತಿತ್ತು. ಈ ವೇಳೆ ಸೇತುವೆ ದಾಟುವಾಗ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾನೆ. ನದಿಯಲ್ಲಿ ಬಟ್ಟೆ ತೊಳೆಯಲು ಬಂದಿದ್ದ ಕೆಲ ಮಹಿಳೆಯರು ನೋಡಿ ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ತಹಸೀಲ್ದಾರ್ ಎ.ಎಚ್. ಮಹೇಂದ್ರ, ಜಿಪಂ ಅಧ್ಯಕ್ಷ ರಾಜುಗೌಡ ಕೆಂಚನಗೌಡ್ರ ಭೇಟಿ ನೀಡಿ ಪರಿಶೀಲಿಸಿದರು.

    ಅಗ್ನಿಶಾಮಕ ಹಾಗೂ ಪೊಲೀಸ್ ಸಿಬ್ಬಂದಿ, ನರಗುಂದ ಮತ್ತು ಬದಾಮಿ ತಾಲೂಕಾಡಳಿತದ ಅಧಿಕಾರಿಗಳು ಭೇಟಿ ನೀಡಿದ್ದು, ವ್ಯಕ್ತಿಯ ಶೋಧ ಕಾರ್ಯ ಮುಂದುವರಿದಿದೆ. ವೆಂಕನಗೌಡ ಸಾಲಿಗೌಡ್ರ ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts