More

    ‘ನನ್ನ ಶಾಲೆ-ನನ್ನ ಜವಾಬ್ದಾರಿ’ಕಾರ‌್ಯಕ್ರಮಕ್ಕೆ ಶೀಘ್ರ ಸಿಎಂ ಚಾಲನೆ

    ಚಿತ್ರದುರ್ಗ: ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕಡ್ಡಾಯವಾಗಿ ಮುಖ್ಯವಾಹಿನಿಗೆ ತರಬೇಕೆಂದು ಶಿಕ್ಷಣ ಸಚಿವ ಎಸ್.ಮಧುಬಂ ಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದರು.
    ಸಚಿವರಾದ ಬಳಿಕ ಜಿಪಂದಲ್ಲಿ ಮಂಗಳವಾರ ಇಲಾಖೆಯ ಪ್ರಥಮ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಶಾಲೆ ಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವ ನಿಟ್ಟಿನಲ್ಲಿ ಡಿಡಿಪಿಐ ಹೆಚ್ಚಿನ ಜವಾಬ್ದಾರಿಯನ್ನು ತೆಗೆದುಕೊಳ್ಳ ಬೇಕು, ಬಿಇಒ, ಬಿಆರ್‌ಸಿ,ಸಿಆರ್‌ಪಿ ಹಾಗೂ ಮುಖ್ಯ ಶಿಕ್ಷಕರು,ಶಿಕ್ಷಕರ ಮಕ್ಕಳ,ಪಾಲಕರ ಮನವೊಲಿಸಬೇಕು.
    ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ, ಬಿಸಿಯೂಟ, ಹಾಲು,ಮೊಟ್ಟೆ, ಬಾಳೆಹಣ್ಣು,ಶೇಂಗಾಚಿಕ್ಕಿ ಹಾಗೂ ಶಾಲೆಗಳಿಗೆ ಉ ಚಿತ ವಿದ್ಯುತ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಿದೆಂಬುದನ್ನು ಅಧಿಕಾರಿಗಳಿಗೆ ನೆನಪಿಸಿದರು. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪ ರೀಕ್ಷೆ ಫಲಿತಾಂಶದಲ್ಲಿ ಕಳೆದ ವರ್ಷ ಚಿತ್ರದುರ್ಗ ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಸ್ಥಾನಗಳಿಸಿದೆ. ಇದ ರಲ್ಲಿ ಜಿಲ್ಲೆ ಇತರೆ ಜಿಲ್ಲೆಗಳಿಗೆ ಮಾದ ರಿಯಾಗಿದೆ ಎಂದರು.
    ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ‘ನನ್ನ ಶಾಲೆ-ನನ್ನ ಜವಾಬ್ದಾರಿ’ಎಂಬ ಕಾರ್ಯಕ್ರಮ ರೂಪಿಸಿ,ಶಾಲೆಯ ಹಳೆಯ ವಿದ್ಯಾರ್ಥಿ ಗಳು,ಶಿಕ್ಷಕರ, ದಾನಿಗಳ,ಪಾಲಕರ ನೆರವು ಪಡೆದು, ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅ ವರು ಈ ಕಾರ್ಯಕ್ರಮಕ್ಕೆ ಶೀಘ್ರ ಚಾಲನೆ ನೀಡಲಿದ್ದಾರೆ ಎಂದರು.
    ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ ಮಾತನಾಡಿ, 2023-24ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ 429 ಮಕ್ಕಳಲ್ಲಿ ಈಗಾಗಲೇ 381 ಮಕ್ಕಳನ್ನು ಮುಖ್ಯವಾಹಿನಿಗೆ ತರಲಾಗಿದೆ. 48 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು, ಇವರನ್ನು ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಕ್ರಮ ವಹಿಸಲಾಗುತ್ತಿದೆ. ಜಿಲ್ಲೆಯಲ್ಲಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಕೊರತೆ ಇಲ್ಲ ಎಂದರು.
    ಚಳ್ಳಕೆರೆ ತಾಲೂಕು ಅಭಿಷೇಕ್ ನಗರ ಹಾಗೂ ಹಿರಿಯೂರು ತಾಲೂಕು ಕೆರೆಮುಂದಲಹಟ್ಟಿಯಲ್ಲಿ ಕಿರಿಯ ಪ್ರಾಥಮಿಕ ಶಾಲೆಗಳ ಬೇ ಡಿಕೆ ಇದೆ. ಮೊಳಕಾಲ್ಮೂರು ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದು,ಈ ಶಾಲೆಗಳನ್ನು ಪ್ರೌಢಶಾಲೆಗಳಾಗಿ ಉನ್ನತೀಕರಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಹೊಸದಾಗಿ 23 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂ ಭಿಸಲು ಪ್ರಸ್ತಾವನೆ ಸಲ್ಲಿ ಸಲಾಗಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ರಾಜ್ಯದಲ್ಲೇ ಮತ್ತೆ ಪ್ರಥಮ ಸ್ಥಾನ ಪಡೆಯಲು ಈ ಬಾರಿ ಕೂಡ ಪ್ರಯತ್ನಿಸಲಾಗುವುದೆಂದ ರು.
    ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮಪಡಿಸುವ ಸಂಬಂಧ ಜಿಲ್ಲಾ ಹಂತದಲ್ಲಿ ಏರ್ಪಡಿಸುವ ವಿವಿಧ ವಿಷಯಗಳ ಕಾರ್ಯಾಗಾರಗಳ ವಿಷಯವಾರು ಪರೀಕ್ಷಾ ಪೂರಕ ಸಾಹಿತ್ಯಗಳನ್ನು ಸಚಿವರು ಬಿಡುಗಡೆ ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್,ಜಿಪಂ ಸಿಇ ಒ ಎಸ್.ಜೆ.ಸೋಮಶೇಖರ್,ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ,ಡಯಟ್ ಪ್ರಾಂಶುಪಾಲ ನಾಸಿರುದ್ದೀನ್ ಮತ್ತಿತರ ಅ ಧಿಕಾರಿಗಳಿದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts