More

    ನೀರಿನ ಕಾಮಗಾರಿಗೆ 1.45 ರೂ. ಕೋಟಿ ವೆಚ್ಚ

    ಬಾಳೆಹೊನ್ನೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಕುಡಿಯುವ ನೀರಿನ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಬಿ.ಕಣಬೂರು ಗ್ರಾಪಂ ಅಧ್ಯಕ್ಷ ಸದಾಶಿವ ಆಚಾರ್ಯ ತಿಳಿಸಿದರು.

    ರೇಣುಕನಗರದ ಐಟಿಐ ಕಾಲೇಜು ರಸ್ತೆಯಲ್ಲಿ ಪೈಪ್‌ಲೈನ್ ಹಾಗೂ ಓವರ್ ಹೆಡ್ ಟ್ಯಾಂಕ್ ನಿರ್ಮಾಣಕ್ಕೆ ಬುಧವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಕೇಂದ್ರ ಸರ್ಕಾರದ ಜಲಜೀವನ್ ಯೋಜನೆಯಡಿ ಕಡ್ಲೇಮಕ್ಕಿ, ರೇಣುಕನಗರಕ್ಕೆ ಕುಡಿಯುವ ನೀರಿನ ಸೌಲಭ್ಯ ಒದಗಿಸಲು 1.45 ರೂ. ಕೋಟಿ ಅನುದಾನ ಮಂಜೂರಾಗಿದ್ದು, ಇದರಲ್ಲಿ ಪೈಪ್‌ಲೈನ್ ನಿರ್ಮಾಣ, 50 ಸಾವಿರ ಲೀಟರ್ ವೆಚ್ಚದ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಮಾಡಲಾಗುವುದು ಎಂದರು.
    ಬಾಳೆಹೊನ್ನೂರಿಗೆ ಕುಡಿಯುವ ನೀರೊದಗಿಸಲು 1.53 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಇದರಲ್ಲಿ ಎರಡು ಲಕ್ಷ ಲೀಟರ್ ಸಾಮರ್ಥ್ಯವುಳ್ಳ ನೀರಿನ ಟ್ಯಾಂಕ್ ನಿರ್ಮಾಣ ಮಾಡಲಾಗುವುದು. ಇದರೊಂದಿಗೆ ಕೊಳವೆ ಬಾವಿಯನ್ನೂ ಕೊರೆಸಲಾಗುವುದು. ಎಲ್ಲ ಕಾಮಗಾರಿಗಳು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
    ಜಿಪಂ ಮಾಜಿ ಸದಸ್ಯ ಮಹಮ್ಮದ್ ಇ್ತೆಖಾರ್ ಆದಿಲ್, ತಾಪಂ ಮಾಜಿ ಅಧ್ಯಕ್ಷ ಎಂ.ಎಸ್.ಜಯಪ್ರಕಾಶ್, ಗ್ರಾಪಂ ಉಪಾಧ್ಯಕ್ಷೆ ರಂಜಿತಾ, ಸದಸ್ಯರಾದ ಇಬ್ರಾಹಿಂ ಶಾಫಿ, ಶಶಿಕಲಾ ಉಮೇಶ್, ಜಾನಕಿ, ಸರಿತಾ, ಸಿಸಿಲಿಯಾ ೆರ್ನಾಂಡಿಸ್, ತಾಪಂ ಮಾಜಿ ಸದಸ್ಯೆ ಹೇಮಲತಾ ಪ್ರಭಾಕರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts