More

    ನರೇಗಾ ಕಾಮಗಾರಿ ಭೇಟಿ, ವೀಕ್ಷಣೆ

    ಬಳ್ಳಾರಿ : ತಾಲೂಕಿನ ವಿವಿಧ ಗ್ರಾಮಗಳ ಗ್ರಾಪಂ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಳಿಸಿದ ಕಾಮಗಾರಿಗಳಿಗೆ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಶುಕ್ರವಾರ ಭೇಟಿ ನೀಡಿ ವೀಕ್ಷಿಸಿದರು.
    ತಾಲೂಕಿನ ಬೈರದೇವನಹಳ್ಳಿ ಗ್ರಾಮದಲ್ಲಿ ಕೈಗೊಂಡಿರುವ ಸಿಸಿ ಚರಂಡಿ , ಶಿವಪುರ ಗ್ರಾಮದಲ್ಲಿ ಅರಣ್ಯ ಇಲಾಖೆಯ ನರ್ಸರಿ ಕ್ಷೇತ್ರಕ್ಕೆ, ಮೋಕಾದಲ್ಲಿ ಕೃಷಿ ಹೊಂಡ ನಿರ್ಮಾಣ, ಕಾರೇಕಲ್ಲು ಗ್ರಾಮದಲ್ಲಿ ಕೃಷಿ ಇಲಾಖೆಯ ಬದು ಮತ್ತು ಕೃಷಿ ಹೊಂಡ ನಿರ್ಮಾಣ, ಶಿಡಿಗಿನಮೋಳ ಮತ್ತು ಮೀನಹಳ್ಳಿ ಗ್ರಾಮದಲ್ಲಿ ಶಾಲಾ ಕಾಂಪೌಂಡ್ ನಿರ್ಮಾಣ, ಪಿ.ಡಿ. ಹಳ್ಳಿಯಲ್ಲಿ ಸ್ಮಶಾನ ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದ ವಿ.ಟಿ.ಕ್ಯಾಂಪ್ ನಲ್ಲಿ ಕಾಲುವೆ, ಸಿಂಧಿಗೇರಿ ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಪ್ರಗತಿ ಹಂತದ ಟ್ರಂಚ್, ಹೆಚ್.ವೀರಾಪುರ ಹಾಗೂ ಸೋಮಲಾಪುರ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಮಹಿಳೆಯರ ಕಾರ್ಯ ನಿರ್ವಹಿಸುವ ಬದು ನಿರ್ಮಾಣ ಕಾಮಗಾರಿಗಳನ್ನು ವೀಕ್ಷಣೆ ನಡೆಸಿ, ಕಾಮಗಾರಿ ಗುಣಮಟ್ಟತೆ ಕಾಯ್ದುಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts