More

    ನಾಗರಿಕರ ಆರೋಗ್ಯ ರಕ್ಷಣೆಗೆ ಆದ್ಯತೆ

    ನಗರಸಭೆ ಅಧ್ಯಕ್ಷ ಸಿ.ಗಿರೀಶ್ ಹೇಳಿಕೆ


    ರಸೀಕೆರೆ: ನಾಗರಿಕರ ಆರೋಗ್ಯ ರಕ್ಷಣೆ ಸರ್ಕಾರದ ಮೊದಲ ಆದ್ಯತೆ ಎಂದು ನಗರಸಭೆ ಅಧ್ಯಕ್ಷ ಸಿ.ಗಿರೀಶ್ ಹೇಳಿದರು.


    ನಗರದ ಸರ್ಕಾರಿ ಜೆ.ಸಿ. ಆಸ್ಪತ್ರೆ ಆವರಣದಲ್ಲಿ ಲಿಕ್ವಿಡ್ ಆಕ್ಸಿಜನ್ ಪ್ಲಾಂಟ್ ಕೊಠಡಿ ನಿರ್ಮಾಣ ಕಾಮಗಾರಿಗೆ ಬುಧವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.


    ನಗರ ಹಾಗೂ ಗ್ರಾಮೀಣ ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಸರ್ಕಾರ ನೆರವಿನ ಮಹಾಪೂರವನ್ನೇ ನೀಡಿದೆ. ಕೋವಿಡ್ ಸಂಕಷ್ಟದಲ್ಲಿ ಖಾಸಗಿ ಹಾಗೂ ಸರ್ಕಾರಿ ಸಹಭಾಗಿತ್ವದಲ್ಲಿ ಆಸ್ಪತ್ರೆ ಆವರಣಕ್ಕೆ ಹೊಂದಿಕೊಂಡಂತೆ ಎರಡು ಪ್ರತ್ಯೇಕ ಪ್ಲಾಂಟ್ ಆರಂಭಿಸಲಾಗಿತ್ತು. ಅಲ್ಲದೆ ತುರ್ತು ಆಕ್ಸಿಜನ್ ಪೂರೈಕೆ ಕೊಠಡಿಗೂ ಅವಕಾಶ ಕಲ್ಪಿಸಿಕೊಡಲಾಗಿತ್ತು. ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಕೆ.ಸುಧಾಕರ್ ಮತ್ತೊಂದು ಪ್ಲಾಂಟ್ ನೀಡಿರುವುದು ಜನಪರ ಕಾಳಜಿಗೆ ಸಾಕ್ಷಿಯಾಗಿದೆ. ಯಶಸ್ವಿನಿ ಅನುಷ್ಠಾನಕ್ಕೂ ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂಬರುವ ದಿನಗಳಲ್ಲಿ ಆರೋಗ್ಯ ಸೇವೆ ಮತ್ತಷ್ಟು ಜನಸ್ನೇಹಿಯಾಗಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.


    ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ಹೊಸ ಸೌಲಭ್ಯಗಳು ರೋಗಿಗಳಿಗೆ ಅನುಕೂಲವಾಗಲಿದೆ ಎಂದರು.


    ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕಾಟೀಕೆರೆ ಪ್ರಸನ್ನ ಕುಮಾರ್, ನಿರ್ದೇಶಕ ಯಾದಾಪುರ ತೇಜಸ್, ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸುರೇಶ್, ಆರೋಗ್ಯ ರಕ್ಷಾ ಸಮಿತಿಯ ರಾಘವೇಂದ್ರ, ಮಂಜುನಾಥ್, ಮೇಘನಾಥನ್, ಚೇತನ್ ಜೈನ್, ವಾಸು, ಬಿಜೆಪಿ ನಗರಾಧ್ಯಕ್ಷ ಪುರುಷೋತ್ತಮ್ ಇತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts