More

    ನಾಡು ನುಡಿ ಉಳಿಸುವ ಜವಾಬ್ದಾರಿ ಬೆಳೆಸಿಕೊಳ್ಳಿ

    ಆಲೂರು: ಕನ್ನಡ ಭಾಷೆ, ನಾಡು-ನುಡಿ-ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯನ್ನು ಕನ್ನಡಿಗರು ಹೊರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎಸ್.ಶಿವಸ್ವಾಮಿ ತಿಳಿಸಿದರು.
    ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಸಂಜೆ ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಮತ್ತು ನಟ ಪುನೀತ್ ರಾಜಕುಮಾರ್ ಅವರ ನುಡಿ-ನಮನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 10ನೇ ತರಗತಿವರೆಗೆ ಮಾತೃಭಾಷೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆಯಬೇಕು. ರಾಜ್ಯೋತ್ಸವ ಇದ್ದಾಗ ಮಾತ್ರ ಭಾಷಾ ಪೋಷಣೆ ಕುರಿತು ಚಿಂತಿಸುತ್ತೇವೆ. ಕನ್ನಡ ಪುಸ್ತಕಗಳನ್ನು ತಪ್ಪದೆ ಓದಬೇಕು. ಇತ್ತೀಚಿಗೆ ಕನ್ನಡ ಬಳಕೆ ಕಡಿಮೆಯಾಗುತ್ತಿದೆ. ಒತ್ತಾಯದಿಂದ ಕನ್ನಡ ನಾಮಫಲಕಗಳನ್ನು ಪ್ರದರ್ಶಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ಎಚ.ಆರ್.ತಿಮ್ಮಯ್ಯ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಬಿ.ಸಂಧ್ಯಾ, ಜಿಲ್ಲಾ ರೋಗ ನಿಯಂತ್ರಣ ಸರ್ವೇಕ್ಷಣಾಧಿಕಾರಿ ಡಾ.ಕೆ.ಬಿ.ಶಿವಶಂಕರ್, ಎನ್‌ವಿಬಿಡಿಸಿಪಿ ಅಧಿಕಾರಿ ಡಾ.ನಾಗಪ್ಪ, ಕುಟುಂಬ ಕಲ್ಯಾಣಧಿಕಾರಿ ಡಾ.ಹರೀಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಎಚ್. ಆರ್. ತಿಮ್ಮಯ್ಯ, ಶಸ್ತ ಚಿಕಿತ್ಸಕ ಡಾ.ನವೀನ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts