More

    ನಾಡು, ನುಡಿ, ನೆಲ, ಜಲದ ರಕ್ಷಣೆಗೆ ಮುಂದಾಗಿ

    ಅರಸೀಕೆರೆ: ನಾಡು, ನುಡಿ, ನೆಲ, ಜಲದ ರಕ್ಷಣೆಗೆ ಸರ್ಕಾರದ ಜತೆಗೆ ಕನ್ನಡಪರ ಸಂಘ ಸಂಸ್ಥೆಗಳು ಕೈಜೋಡಿಸಬೇಕು ಎಂದು ನಗರಸಭೆ ಅಧ್ಯಕ್ಷ ಸಿ.ಗಿರೀಶ್ ಸಲಹೆ ನೀಡಿದರು.

    ನಗರದ ಬಸ್ ನಿಲ್ದಾಣದಲ್ಲಿರುವ ಜೈ ಭುವನೇಶ್ವರಿ ಕಾರು ಚಾಲಕರ ಸಂಘದಿಂದ ಮಂಗಳವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

    ವಿಶಾಲ ಕರ್ನಾಟಕದ ಕನ್ನಡ ಭಾಷೆ ಅಸ್ಮಿತೆ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಮೊದಲ ಆದ್ಯತೆಯಾಗಿದೆ ಎಂಬುದನ್ನು ಮರೆಯಬಾರದು. ಇತ್ತೀಚಿನ ಕೆಲ ದಿನಗಳಲ್ಲಿ ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಅನಗತ್ಯ ತಕರಾರು ಮಾಡುತ್ತಿರುವುದು ಸರಿಯಲ್ಲ. ಶತಮಾನಗಳ ಇತಿಹಾಸ ಹೊಂದಿರುವ ನಾಡು, ನುಡಿ, ನೆಲ, ಜಲದ ರಕ್ಷಣೆಗೆ ಸರ್ಕಾರದ ಜತೆಗೆ ಕನ್ನಡಪರ ಸಂಘ, ಸಂಸ್ಥೆಗಳು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಕರೆ ನೀಡಿದರು.

    ಭರವಸೆ: ಶಾಸಕ ಪ್ರೀತಂಗೌಡ ರೂಪಿಸಿರುವ ಮಾದರಿಯಲ್ಲಿ ಆಯಕಟ್ಟಿನ ಜಾಗಗಳಲ್ಲಿ ಕಾರು ಮತ್ತು ಆಟೋ ಚಾಲಕರಿಗೆ ನೆರಳಿನ ಛಾವಣಿ ನಿರ್ಮಿಸಿಕೊಡುವುದರ ಜತೆಗೆ ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಸಿ.ಗಿರೀಶ್ ಭರವಸೆ ನೀಡಿದರು. ಸಂಘದ ಅಧ್ಯಕ್ಷ ನಿಂಗರಾಜು, ಗಿರೀಶ್, ಗೀಜಿಹಳ್ಳಿ ಕಿರಣ್ ಇನ್ನಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts