More

    ನಾನಾ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

    ಮೈಸೂರು: ಜೇಷ್ಠತೆ ಆಧರಿಸಿ ಗೌರವಧನ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ಮೈಸೂರು ಜಿಲ್ಲಾ ಸಮಿತಿ ಸದಸ್ಯೆಯರು ಸೋಮವಾರ ಪ್ರತಿಭಟನೆ ನಡೆಸಿದರು.

    ಜಿಲ್ಲಾಧಿಕಾರಿ ಕಚೇರಿ ಎದುರು ಜಮಾವಣೆಗೊಂಡ ಅವರು, ಸರ್ಕಾರದ ವಿರುದ್ಧ ನಾನಾ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.
    ಸೇವಾ ಹಿರಿತನದ ಆಧಾರದಲ್ಲಿ ಗೌರವ ಧನ ಹೆಚ್ಚಳ ಮಾಡುವುದು, ದೀರ್ಘ ಸೇವೆ ಸಲ್ಲಿಸಿದವರಿಗೆ ಗೋವಾ ರಾಜ್ಯದ ಮಾದರಿಯನ್ನು ಜಾರಿ ಮಾಡುವುದು, ತಪ್ಪಿದಲ್ಲಿ ಎಲ್ಲರಿಗೂ ಒಪ್ಪುವಂತಹ ಪ್ರತಿವರ್ಷ ಸೇವೆಗೆ ಇಂತಿಷ್ಟು ಮೊತ್ತವೆಂದು ನಿಗದಿಪಡಿಸಿದರೆ ಅವರವರ ಸೇವಾವಧಿಗನುಗುಣವಾಗಿ ಸೌಲಭ್ಯ ಸಿಗಲಿದೆ. ಆದ್ದರಿಂದ ದೀರ್ಘ ಸೇವೆ ಸಲ್ಲಿಸಿದವರಿಗೆ ನ್ಯಾಯ ಸಿಗಲಿದೆ ಎಂದು ಒತ್ತಾಯಿಸಿದರು.

    2015ರ ನಂತರ ನಿವೃತ್ತಿಯಾದ 7294 ಕಾರ್ಯಕಿರ್ತೆಯರಿಗೆ ಮತ್ತು ಸಹಾಯಕಿಯರಿಗೆ ಇಡುಗಂಟು ನೀಡಬೇಕು. ನಿವೃತ್ತ ಕಾರ್ಯಕರ್ತರಿಗೆ ಮತ್ತು ಸಹಾಯಕಿಯರಿಗೆ ಕನಿಷ್ಠ 5000ರೂ.ಗಳ ಮಾಸಿಕ ಪಿಂಚಣಿ ಸೌಲಭ್ಯ ನೀಡಬೇಕು. ಉಚಿತ ವೈದ್ಯಕೀಯ ಸೌಲಭ್ಯ ಕಲ್ಪಿಸುವ ಇಎಸ್‌ಐ ಯೋಜನೆ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

    ಭವಿಷ್ಯ ನಿಧಿ ಯೋಜನೆ ಜಾರಿಗೊಳಿಸಬೇಕು. ಎಲ್ಕೆಜಿ, ಯುಕೆಜಿ ತರಗತಿಗಳನ್ನು ಅಂಗನವಾಡಿಗಳಲ್ಲೇ ಆರಂಭಿಸಬೇಕು. ಅಧಿಕಾರಿಗಳ ದಬ್ಬಾಳಿಕೆ ನಿಲ್ಲಿಸಬೇಕು. ಗುಣಮಟ್ಟದ ಆಹಾರ ಪೂರೈಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
    ಪ್ರತಿಭಟನೆಯಲ್ಲಿ ಭಾಗ್ಯ, ಎಸ್.ಮಹದೇವಮ್ಮ, ಸುನಂದ, ಪುಟ್ಟಮ್ಮ, ರಾಜೇಶ್ವರಿ ಸೇರಿದಂತೆ ಇತರರಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts