More

    ನಾನೂ ಲೋಕಸಭೆ ಚುನಾವಣೆ ಸ್ಪರ್ಧಾಕಾಂಕ್ಷಿ – ಮಾಜಿ ಶಾಸಕ ಎಸ್. ರಾಮಪ್ಪ ಹೇಳಿಕೆ

    ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ನಾನೂ ಸ್ಪರ್ಧಾಕಾಂಕ್ಷಿಯಾಗಿದ್ದು ಟಿಕೆಟ್ ನೀಡುವಂತೆ ಪಕ್ಷಕ್ಕೆ ಅರ್ಜಿ ಸಲ್ಲಿಸಿದ್ದೇನೆ ಎಂದು ಹರಿಹರ ಮಾಜಿ ಶಾಸಕ ಎಸ್. ರಾಮಪ್ಪ ಹೇಳಿದರು.
    ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೆಟ್ ಕೈತಪ್ಪಿತ್ತು. ಕಾಂಗ್ರೆಸ್‌ನಿಂದ ಸ್ಪರ್ಧಿಸಲು ನಾಲ್ಕೈದು ಆಕಾಂಕ್ಷಿಗಳಿದ್ದಾರೆ. ಲೋಕಸಭೆ ಚುನಾವಣೆಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದೇನೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆಯೂ ವರಿಷ್ಠರಿಗೆ ಮನವಿಮಾಡಿರುವುದಾಗಿ ಹೇಳಿದರು.
    ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಧಮಕಿ ಹಾಕುವ ರೀತಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ ನೀಡಿರುವುದು ಸರಿಯಲ್ಲ. ಪ್ರಚೋದನಾಕಾರಿ ಮಾತು ಅವರಿಗೆ ಶೋಭೆ ತರುವುದಿಲ್ಲ ಎಂದು ತಿಳಿಸಿದರು.
    ವಿಧಾನಸಭೆ ಸ್ಪೀಕರ್ ಸ್ಥಾನ ಅತಿ ದೊಡ್ಡದು. ಕಾಂಗ್ರೆಸ್ ತಮ್ಮ ಸಮಾಜಕ್ಕೆ ಅತ್ಯಂತ ಮಹತ್ವದ ಸ್ಥಾನ ನೀಡಿರುವ ಕುರಿತು ಸಚಿವ ಜಮೀರ್ ಅಹಮದ್ ಹೇಳಿಕೆ ನೀಡಿದ್ದಾರೆ ಹೊರತು ಮತಗಳಿಕೆಗಾಗಿ ಅಲ್ಲ ಎಂದು ಸ್ಪಷ್ಟಪಡಿಸಿದರು.
    ಅಂಜುಮನ್ ಸಂಸ್ಥೆ ಮಾಜಿ ಅಧ್ಯಕ್ಷ ಮಹಮದ್ ಫೈರೋಜ್, ಹರಿಹರ ನಗರಸಭಾ ಸದಸ್ಯ ಎಂ.ಎಸ್. ಬಾಬುಲಾಲ್, ಹಂಚಿನ ನಾಗಪ್ಪ ಸುದ್ದಿಗೋಷ್ಠಿಯಲ್ಲಿದ್ದರು.
    —-

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts