More

    ನಾಲ್ಕು ಸೇತುವೆಗಳು ಜಲಾವೃತ

    ಬೆಳಗಾವಿ: ಜಿಲ್ಲೆಯ ಮೂಡಲಗಿ ತಾಲೂಕಿನ ಟಪ್ರಭಾ ನದಿಗೆ ಹರಿದು ಬರುತ್ತಿರುವ ನೀರಿನ ಮಟ್ಟ ಹೆಚ್ಚಾಗಿದ್ದರಿಂದ ತಾಲೂಕಿನ ನಾಲ್ಕು ಸೇತುವೆಗಳು ಮಂಗಳವಾರ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ.

    ಒಂದು ವಾರದಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಟಪ್ರಭಾ, ಹಿರಣ್ಯಕೇಶಿ, ಮಾರ್ಕಂಡೇಯ ಹಾಗೂ ಬಳ್ಳಾರಿ ನಾಲಾ ಸೇರಿ ಟಪ್ರಭಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದರಿಂದ ತಾಲೂಕಿನ ಅವರಾದಿ ಹಾಗೂ ಮಹಾಲಿಂಗಪುರಕ್ಕೆ ಸಂಪರ್ಕ ಕಲ್ಪಿಸುವ ಅವರಾದಿ ಸೇತುವೆ, ಸುಣಧೋಳಿ ಹಾಗೂ ಮೂಡಲಗಿಗೆ ಸಂಪರ್ಕ ಕಲ್ಪಿಸುವ ಸುಣಧೋಳಿ ಸೇತುವೆ, ವಡೇರಹಟ್ಟಿ ಹಾಗೂ ಉದಗಟ್ಟಿಗೆ ಸಂಪರ್ಕ ಕಲ್ಪಿಸುವ ವಡೇರಹಟ್ಟಿ ಸೇತುವೆ, ಕಮಲದಿನ್ನಿ ಹಾಗೂ ಹುಣಶ್ಯಾಳ ಪಿವೈಗೆ ಸಂಪರ್ಕ ಕಲ್ಪಿಸುವ ಕಮಲದಿನ್ನಿ ಸೇತುವೆಗಳು ಜಲಾವೃತಗೊಂಡ ಪರಿಣಾಮ ಹಲವು ಸಂಚಾರ ಸ್ಥಗಿತಗೊಂಡು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

    ತಾಲೂಕಾಡಳಿತದಿಂದ ನದಿಯ ದಡಕ್ಕೆ ಯಾರು ಹೋಗದಂತೆ ಹಾಗೂ ನದಿಯ ದಡದಲ್ಲಿ ಇರುವಂತ ಸಾರ್ವಜನಿಕರು ಮತ್ತು ಜಾನುವಾರುಗಳೊಂದಿಗೆ ಸುರತ ಸ್ಥಳಕ್ಕೆ ತೆರಳುವಂತೆ ಗ್ರಾಮಸ್ಥರಲ್ಲಿ ಡಗುರ ಸಾರುವ ಮೂಲಕ ಮನವಿ ಮಾಡಿಕೊಂಡಿದ್ದು, ನದಿಯ ದಡಿಯಲ್ಲಿ ಪೊಲೀಸ್​ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ತಹಸೀಲ್ದಾರ್​ ಡಿ.ಜಿ.ಮಹಾತ್​ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts