More

    ನಾಲ್ವರ ಬಂಧನ

    ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ

    ಎಸ್​ಡಿಪಿಐ, ಪಿಎಫ್​ಐ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ, ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ ನಾಲ್ವರನ್ನು ಬಂಧಿಸಿದ್ದಾರೆ.

    ಹುಬ್ಬಳ್ಳಿಯ ಕಸಬಾಪೊಲೀಸ್ ಠಾಣೆ ವ್ಯಾಪ್ತಿಯ ನವೀದ್ ಸುರ್ದಜಿ, ಗ್ರಾಮೀಣ ವ್ಯಾಪ್ತಿಯ ಅಬ್ಬಾಸಲಿ ಮಂಟಗಣಿ, ಕಲಘಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಮಿಶ್ರಿಕೋಟಿಯ ಸಿಕಂದರ್ ಶಾಲಗಾರ್, ಫಾರುಕ್ ಕುಂಬಿ ಬಂಧಿತರು. ಮುಂಜಾಗ್ರತಾ ಕ್ರಮವಾಗಿ 10ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಅನಧಿಕೃತ ಪ್ರತಿಭಟನೆ: ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಪಿಎಫ್​ಐ ಕಾರ್ಯಕರ್ತರು ಅನಧಿಕೃತವಾಗಿ ಪ್ರತಿಭಟನೆ ನಡೆಸಿದರು. ಅಲ್ಲದೇ ಪೊಲೀಸರ ವಿರುದ್ಧ ಸಂಚು ರೂಪಿಸಿದ್ದರು ಎಂಬ ಆರೋಪವಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಈಗಾಗಲೇ ಹು-ಧಾ ಕಮಿಷನರೇಟ್ ವ್ಯಾಪ್ತಿಯಲ್ಲಿ 53 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts