More

    ನಾಲ್ವರ ವಿರುದ್ಧ ಕ್ರಿಮಿನಲ್ ಕೇಸ್

    ಚಿಕ್ಕಮಗಳೂರು: ಕಲ್ಲುದೊಡ್ಡಿ ಆಶ್ರಯ ಬಡಾವಣೆಯಲ್ಲಿ ಅನಧಿಕೃತವಾಗಿ ಮನೆಕಟ್ಟಿ ಲಕ್ಷಾಂತರ ರೂಪಾಯಿ ಪಡೆದು ಬಡವರಿಗೆ ಮಾರಾಟ ಮಾಡಿರುವ ದೂರು ಅರ್ಜಿಗಳ ಆಧಾರದಲ್ಲಿ ನಾಲ್ವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲು ನಗರ ಆಶ್ರಯ ಸಮಿತಿ ಸಭೆಯಲ್ಲಿ ನಿರ್ಣಯಿಸಲಾಯಿತು.

    ನಗರಸಭೆಯಲ್ಲಿ ಬುಧವಾರ ಆಶ್ರಯ ಸಮಿತಿ ಅಧ್ಯಕ್ಷ ನಾರಾಯಣ ಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ನಗರ ಆಶ್ರಯ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಅಧ್ಯಕ್ಷ ನಾರಾಯಣ ಸ್ವಾಮಿ ಮಾತನಾಡಿ, ಜನರ ದೂರಿನನ್ವಯ ಕಲ್ಲುದೊಡ್ಡಿ ಆಶ್ರಯ ಬಡಾವಣೆಯಲ್ಲಿ ನಗರಸಭೆ ಅಧಿಕಾರಿ, ಸಿಬ್ಬಂದಿ ಈ ಹಿಂದೆ ಪರಿಶೀಲಿಸಿ ಅನಧಿಕೃತ 17 ಮನೆಗಳನ್ನು ತೆರವುಗೊಳಿಸಲಾಗಿತ್ತು. ಆದರೂ ಕೆಲವು ಪ್ರಭಾವಿಗಳು ಯಾರದೋ ಹೆಸರಿನಲ್ಲಿದ್ದ ನಿವೇಶನದಲ್ಲಿ ಮನೆ ಕಟ್ಟಿಕೊಳ್ಳಿ ಎಂದು ಹೇಳಿ 4 ಮಂದಿ ಬಡವರಿಂದ 5.15 ಲಕ್ಷ ರೂ. ವಸೂಲಿ ಮಾಡಿಕೊಂಡಿದ್ದರು. ಈ ಕುರಿತು ನಾಲ್ಕು ಮಂದಿ ದೂರು ನೀಡಿದ್ದರು. ಮುಂದಿನ ದಿನಗಳಲ್ಲಿ ಬಡವರಿಗೆ ವಂಚನೆ ಮಾಡಬಾರದೆಂಬ ದೃಷ್ಟಿಯಿಂದ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲು ಸಭೆ ಸಮ್ಮತಿಸಿದೆ ಎಂದರು.

    ಪೌರಾಯುಕ್ತ ಬಿ.ಸಿ.ಬಸವರಾಜ್ ಮಾತನಾಡಿ, ನಗರಸಭೆ ಜಾಗಗಳಲ್ಲಿ ಹತ್ತಾರು ವರ್ಷಗಳಿಂದ ಅಕ್ರಮವಾಗಿ ಮನೆಕಟ್ಟಿಕೊಂಡು ನಗಸಭೆಯ ಎಲ್ಲ ಸೌಕರ್ಯಗಳನ್ನು ಪಡೆಯುತ್ತಿದ್ದಾರೆ. ಆದರೆ ಅವರಿಗೆ ಯಾವುದೆ ದಾಖಲಾತಿಗಳು ಇಲ್ಲ. ಸಂಬಂಧಪಟ್ಟ ವಾರ್ಡ್ ಪರಿವೀಕ್ಷಕರು ಸಮೀಕ್ಷೆ ಮಾಡಿ ಅಂಥ ಫಲಾನುಭವಿಗಳನ್ನು ಗುರುತಿಸಿ ಒಂದು ವಾರದೊಳಗೆ ಖಾತೆ ಇಲ್ಲದವರ ವಾರ್ಡ್​ವಾರು ಪಟ್ಟಿ ನೀಡಲು ಆರ್​ಐಗಳಿಗೆ ಸೂಚಿಸಲಾಗಿದ್ದು ಅರ್ಹ ಫಲಾನುಭವಿಗಳಾಗಿದ್ದರೆ ಸರ್ವೆ ಮಾಡಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮೂಲಕ ರಾಜೀವ್​ಗಾಂಧಿ ವಸತಿ ನಿಗಮಕ್ಕೆ ಕಳುಹಿಸಿ ಹಕ್ಕುಪತ್ರ ನೀಡಲಾಗುತ್ತದೆ ಎಂದು ವಿವರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts